ಡಿಸೆಂಬರ್ 2 ರಂದು ಜಿಲ್ಲಾಮಟ್ಟದ ಯುವಜನೋತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವಜನ ಒಕ್ಕೂಟ, ಮಂಗಳೂರು ತಾಲೂಕು ಯುವಜನ ಒಕ್ಕೂಟ, ಉಳ್ಳಾಲ ಪುರಸಭೆ ಹಾಗೂ ಶೃತಿಲಯ ಕಲಾ ಕೇಂದ್ರ ಕುತ್ತಾರು, ಉಳ್ಳಾಲ ಇವರ ಸಹಯೋಗದಲ್ಲಿ 2023-24ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಡಿಸೆಂಬರ್ 2 ರಂದು ಉಳ್ಳಾಲ ನಗರಸಭಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ಸ್ಪರ್ಧಾಳುಗಳು ಡಿಸೆಂಬರ್ 2ರಂದು ಬೆಳಗ್ಗೆ 9 ಗಂಟೆಯ ಒಳಗೆ ವರದಿ ಮಾಡಿಕೊಳ್ಳಬೇಕು. ಭಾಗವಹಿಸುವ ಸ್ಪರ್ಧಾಳುಗಳು 15 ರಿಂದ 29 ವರ್ಷದವರಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯವರಾಗಿರಬೇಕು, ಜನ್ಮ ದಿನಾಂಕ ದೃಢೀಕರಣ ದಾಖಲೆಯನ್ನು ತಪ್ಪದೇ ಹಾಜರುಪಡಿಸಬೇಕು. ಭಾಗವಹಿಸುವವರಿಗೆ ಪ್ರಯಾಣ ಭತ್ಯೆಯನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು ಆದ್ದರಿಂದ ತಪ್ಪದೇ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿಯನ್ನು ತರಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ದೂರವಾಣಿ ಸಂಖ್ಯೆ 0824-2451264 ಸಂಪರ್ಕಿಸುವಂತೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಮಂಗಳೂರು: ಬೇಕಿಂಗ್ ಕಂಪನಿಯ ಮಾಲಕಿ ಒಶಿನ್ ಪಿರೇರಾ ಥೈಲ್ಯಾಂಡ್‌‌ನಲ್ಲಿ ಮೃತ್ಯು

error: Content is protected !!
Scroll to Top