(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲೆ, ಸ್ಮಾರ್ಟ್ ಸಿಟಿ ಲಿಮಿಟೆಡ್ ಇದರ ಸಹಯೋಗದಲ್ಲಿ ನಗರದ ಎಮ್ಮೆಕೆರೆಯಲ್ಲಿ ನಿರ್ಮಿಸಲಾಗಿರುವ ಅಂತರಾಷ್ಟ್ರೀಯ ಈಜುಕೊಳದ ಉದ್ಘಾಟನೆ ನವೆಂಬರ್ 24ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಸ್ಪೀಕರ್ ಯುಟಿ ಖಾದರ್ ಫರೀದ್ ಅವರ ಘನ ಉಪಸ್ಥಿತಿಯಲ್ಲಿ ಅಂತರಾಷ್ಟ್ರೀಯ ಈಜುಕೊಳದ ಉದ್ಘಾಟನೆಯನ್ನು ನಗರಾಭಿವೃದ್ಧಿ ಸಚಿವ ಸುರೇಶ್ ಬಿ.ಎಸ್ ನೆರವೇರಿಸುವರು. 19ನೇ ರಾಷ್ಟ್ರೀಯ ಮಾಸ್ಟರ್ ಚಾಂಪಿಯನ್‍ಶಿಪ್ ಈಜು ಸ್ಪರ್ಧೆ ಉದ್ಘಾಟನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಈಜು ಸ್ಪರ್ಧೆಯ ಸ್ಮರಣ ಸಂಚಿಕೆ ಬಿಡುಗಡೆಯನ್ನು ಯೋಜನಾ ಸೇವೆ ಮತ್ತು ಕ್ರೀಡೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ ನಾಗೇಂದ್ರ ನಡೆಸಲಿದ್ದಾರೆ. ಅಂತರಾಷ್ಟ್ರೀಯ ಈಜುಕೊಳ ಕಟ್ಟಡದ ವಿಶ್ರಾಂತಿ ಕೊಠಡಿಯನ್ನು ಲೋಕಸಭೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಹಾಗೂ ಈಜುಕೊಳ ಜಿಮ್ ಕೊಠಡಿಯನ್ನು ಮೇಯರ್ ಸುಧೀರ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಶಾಸಕರಾದ ಡಿ.ವೇದವಾಸ್ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.