ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಏರ್ ಇಂಡಿಯಾ ವಿಮಾನದಲ್ಲಿ ಗೌರವಾರ್ಪಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ವಿದೇಶದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಹೊರಟಿದ್ದ ಪದ್ಮಶ್ರೀ ಹರೇಕಳ ಹಾಜಬ್ಬರನ್ನು ವಿಮಾನದ ಸಿಬ್ಬಂದಿ ಅಭಿನಂದಿಸಿ ಗೌರವಿಸಿದ ಕುರಿತು ವರದಿಯಾಗಿದೆ.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರವರು ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಮಂಗಳೂರಿನಿಂದ ದಮ್ಮಾಮ್ ಗೆ ಪ್ರಯಾಣಿಸುತ್ತಿದ್ದ ವೇಳೆ ಅವರನ್ನು ಗುರುತಿಸಿದ ಏರ್ ಇಂಡಿಯ ಎಕ್ಸ್ ಪ್ರೆಸ್ ನ ಸಿಬ್ಬಂದಿಯೋರ್ವರು ವಿಮಾನದ ಕ್ಯಾಪ್ಟನ್ ನ ಗಮನಕ್ಕೆ ತಂದಿದ್ದಾರೆ. ಈ ವೇಳೆ ಕ್ಯಾಪ್ಟನ್, ವಿಮಾನದಲ್ಲಿರುವ ಪ್ರಯಾಣಿಕರಿಗೆ ಹಾಜಬ್ಬರನ್ನು ಪರಿಚಯಿಸುತ್ತಾ, ಶಿಕ್ಷಣ ರಂಗದಲ್ಲಿ ಅಪೂರ್ವ ಸೇವೆ ಸಲ್ಲಿಸಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿರುವ ಹರೇಕಳ ಹಾಜಬ್ಬರವರು ನಮ್ಮ ವಿಮಾನದಲ್ಲಿ ಪ್ರಯಾಣಿಸುತ್ತಿರುವುದು ನಮಗೆ ಸಂತೋಷ ತಂದಿದೆ. ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು” ಎಂದರು. ಪ್ರೇರಣಾ ಭಾಷಣಗಾರ ರಫೀಕ್ ಮಾಸ್ಟರ್ ಮಂಗಳೂರು ಹಾಗೂ ಉದ್ಯಮಿ ಫಾರೂಕ್ ಕನ್ಯಾನ ಈ ವೇಳೆ ಹಾಜಬ್ಬರ ಜೊತೆಗಿದ್ದರು.

Also Read  ಕೇಂದ್ರ ಬಜೆಟ್‍ನಲ್ಲಿ ಆಧುನಿಕ ತಂತ್ರಜ್ಞಾನ ಮತ್ತು ಡಿಜಿಟಲೀಕರಣಕ್ಕೆ ಒತ್ತು ➤ ಮಟ್ಟಾರ್ ರತ್ನಾಕರ್ ಹೆಗ್ಡೆ

error: Content is protected !!
Scroll to Top