ಡಿಸೆಂಬರ್ 23ರಂದು 545 ಪಿಎಸ್ಐ ಹುದ್ದೆಗಳಿಗೆ ಮರು ಪರೀಕ್ಷೆ ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 23. ತೀವ್ರ ವಿವಾದಕ್ಕೆ ಗುರಿಯಾಗಿದ್ದ 545 ಪಿಎಸ್‍ಐಗಳ ನೇಮಕಾತಿಗೆ ಮರು ಪರೀಕ್ಷೆಯನ್ನು ಡಿಸೆಂಬರ್ 23ರಂದು ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ. 2021ರ ಅಕ್ಟೋಬರ್ 3 ರಂದು ಪಿಎಸ್ಐ ನೇಮಕಾತಿಗಾಗಿ ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಆದರೆ, ಪಿಎಸ್ಐ ಪರೀಕ್ಷೆಯಲ್ಲಿ ಭಾರೀ ಅಕ್ರಮಗಳು ನಡೆದಿರುವುದಾಗಿ ಆರೋಪಗಳು ಕೇಳಿ ಬಂದ ಹಿನ್ನೆಲೆ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್‍ಪಾಲ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳು, ಮಧ್ಯವರ್ತಿಗಳು, ಪರೀಕ್ಷಾರ್ಥಿಗಳನ್ನು ಅಧಿಕಾರಿಗಳು ಬಂಧಿಸಿದ್ದರು.

 

 

ಮೇಲ್ನೋಟಕ್ಕೆ ಅಕ್ರಮಗಳ ಖಚಿತ ಮಾಹಿತಿ ದೊರೆತ ಹಿನ್ನೆಲೆ ಪರೀಕ್ಷೆಯ ಅಧಿಸೂಚನೆಯನ್ನು ಆಗಿನ ಸರ್ಕಾರ ರದ್ದುಗೊಳಿಸಿ ಮರು ಪರೀಕ್ಷೆಗೆ ಆದೇಶಿಸಿತ್ತು. ಅದನ್ನು ಕೆಲವು ಅಭ್ಯರ್ಥಿಗಳು ಹೈಕೋರ್ಟ್‍ನಲ್ಲಿ ಪ್ರಶ್ನಿಸಿದ್ದರು. ಇದೀಗ ಸುದೀರ್ಘ ವಿಚಾರಣೆಯ ಬಳಿಕ ಹೈಕೋರ್ಟ್ ತೀರ್ಪು ಪ್ರಕಟಿಸಿದ್ದು, ಸರಕಾರದ ಮರುಪರೀಕ್ಷೆಯ ನಿರ್ಧಾರವನ್ನು ಎತ್ತಿಹಿಡಿದಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ಮರು ಪರೀಕ್ಷೆಗೆ ತ್ವರಿತ ಕ್ರಮಗಳನ್ನು ಕೈಗೊಂಡಿದೆ. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮರು ಪರೀಕ್ಷೆಯನ್ನು ಆಯೋಜನೆ ಮಾಡಲಾಗುತ್ತಿದ್ದು, ಪ್ರಾಧಿಕಾರದ ಪ್ರಕಟಣೆಯ ಪ್ರಕಾರ ಪಿಎಸ್ಐ ನೇಮಕಾತಿಯ ಮರು ಪರೀಕ್ಷೆ ಡಿಸೆಂಬರ್ 23ರಂದು ಬೆಂಗಳೂರಿನಲ್ಲಿ ನಡೆಯಲಿದೆ.

Also Read  ಎಸ್ಡಿಪಿಐ ಬಡಗಜೆಕಾರು ಗ್ರಾಮ ಸಮಿತಿ ➤ ಗ್ರಾ.ಪಂ. ಚುನಾವಣಾ ಅಭ್ಯರ್ಥಿ ಘೋಷಣಾ ಕಾರ್ಯಕ್ರಮ

error: Content is protected !!
Scroll to Top