(ನ್ಯೂಸ್ ಕಡಬ) newskadaba.com ಸುರತ್ಕಲ್, ನ. 23. ಮುಕ್ಕ ಚೆಕ್‌ಪೋಸ್ಟ್ ಬಳಿ ಹೆದ್ದಾರಿ ಬದಿ ನಿಲ್ಲಿಸಲಾಗಿದ್ದ ಲಾರಿಯೊಂದರ ಹಿಂಭಾಗಕ್ಕೆ ಆಟೋರಿಕ್ಷಾವೊಂದು ಢಿಕ್ಕಿ ಹೊಡೆದ ಪರಿಣಾಮ ಚಾಲಕ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ರಿಕ್ಷಾ ಚಾಲಕನನ್ನು ಮಯ್ಯದ್ದಿ ಎಂದು ಗುರುತಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಫಲಕ ಅಳವಡಿಸದೇ ಲಾರಿ ನಿಲ್ಲಿಸಿದ ಚಾಲಕ ಕಳಸಪ್ಪ ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದೆ.
ನಿಲ್ಲಿಸಿದ್ದ ಲಾರಿಗೆ ಆಟೋ ರಿಕ್ಷಾ ಢಿಕ್ಕಿ- ಚಾಲಕನಿಗೆ ಗಾಯ
