ಟಿ20 ಕ್ರಿಕೆಟ್ ಗೆ ರೋಹಿತ್‌ ಶರ್ಮಾ ಶೀಘ್ರ ವಿದಾಯ..!

(ನ್ಯೂಸ್ ಕಡಬ) newskadaba.com ಮುಂಬೈ, ನ. 23. ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಕೊನೆಯ ಹಂತದಲ್ಲಿ ಸೋಲಾಯಿತು. ಈ ಬೆನ್ನಲ್ಲೇ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಟಿ 20 ಕ್ರಿಕೆಟ್ ಗೆ ರೋಹಿತ್ ಶರ್ಮ ವಿದಾಯ ಹೇಳುವ ಸುದ್ದಿ ಹೊರಬಿದ್ದಿದೆ.


ಹಿಟ್​ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ-20 ಕ್ರಿಕೆಟ್‌ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದ್ದು, ಏಕದಿನ ವಿಶ್ವಕಪ್ ಟೂರ್ನಿಗೂ ಮೊದಲು ಬಿಸಿಸಿಐ ಜೊತೆ ಈ ಕುರಿತು ರೋಹಿತ್ ಶರ್ಮಾ ಮಾತನಾಡಿದ್ದಾರೆ. ಸ್ವಯಂಪ್ರೇರಿತವಾಗಿ ರೋಹಿತ್ ಶರ್ಮಾ ಈ ನಿರ್ಧಾರವನ್ನು ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರ ಜೊತೆಗೆ ಈಗಾಗಲೇ ಚರ್ಚೆ ಮಾಡಿದ್ದಾರೆ ಎಂದು ವರದಿಯಾಗಿದೆ.

Also Read  ಉಡುಪಿ: ನಾಳೆಯಿಂದ ಲಾಕ್‌ಡೌನ್ ಮತ್ತಷ್ಟು ಸಡಿಲಿಕೆ

error: Content is protected !!
Scroll to Top