(ನ್ಯೂಸ್ ಕಡಬ) newskadaba.com ಮಂಗಳೂರು, ನ. 24. 2023-24ನೇ ಸಾಲಿನ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಕ್ರಿಯಾಯೋಜನೆಯಡಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಪಂಗಡದ ನಿರುದ್ಯೋಗ ಯುವಕ ಯುವತಿಯರಿಗೆ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಜಿಲ್ಲಾ ಅಥವಾ ತಾಲೂಕು ಮಟ್ಟದಲ್ಲಿ ಉದ್ದಿಮೆ ಸ್ಥಾಪಿಸಲು ಘಟಕ ವೆಚ್ಚದ ಶೇ. 70ರಷ್ಟು ಅಥವಾ ರೂ. 5ಲಕ್ಷಗಳ ಸಹಾಯಧನವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಡಿಸೆಂಬರ್ ಅಂತ್ಯದೊಳಗೆ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಮಾನದಂಡಗಳು;
ಅರ್ಜಿದಾರರ ಕುಟುಂಬದ ಆದಾಯ ಗ್ರಾಮೀಣ ಪ್ರದೇಶದವರಿಗೆ ರೂ. 1.50 ಲಕ್ಷ ಹಾಗೂ ನಗರ ಪ್ರದೇಶದವರಿಗೆ ರೂ.2 ಲಕ್ಷ ಮಿತಿಯಲ್ಲಿರಬೇಕು. ಅರ್ಜಿದಾರರು ಕಳೆದ 15 ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು, ವಯೋಮಿತಿ 21ರಿಂದ 50 ವರ್ಷದವರಾಗಿರಬೇಕು, ಅರ್ಜಿದಾರರ ಕುಟುಂಬದ ಸದಸ್ಯರು ಸರ್ಕಾರಿ ಅಥವಾ ಅರೆಸರ್ಕಾರಿ ಸಂಸ್ಥೆಯ ನೌಕರರಾಗಿರಬಾರದು, ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ, ಅಲೆಮಾರಿ, ಅರೆಅಲೆಮಾರಿ ಜನಾಂಗದವರ ಮಕ್ಕಳಿಗೆ ಆದ್ಯತೆ ನೀಡಲಾಗುವುದು. ಅರ್ಜಿದಾರರು ಅಥವಾ ಅವರ ಕುಟುಂಬದವರು ಈ ಹಿಂದೆ ನಿಗಮದಿಂದ ಯಾವುದೇ ಆರ್ಥಿಕ ಸೌಲಭ್ಯ ಪಡೆದಿರಬಾರದು. ಅರ್ಜಿದಾರರು ಕಡ್ಡಾಯವಾಗಿ ಯುಎಎಂ ನೋಂದಾಯಿತರಾಗಿರಬೇಕು, ಸಹಾಯಧನ ಹೊರತುಪಡಿಸಿ ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ. ಸ್ಥಾಪಿಸಿದ ಉದ್ಯಮದಲ್ಲಿ ಒಬ್ಬ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ ಯುವಕರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು. ಅರ್ಜಿದಾರರು ಪರಿಷ್ಟ ಜಾತಿಗೆ ಸಂಬಂಧಿಸಿದ ಅಭಿವೃದ್ಧಿ ನಿಗಮಗಳಿಗೆ ಯೋಜನಾ ವರದಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಾರ್ಯಾಲಯ, ಜನತಾ ಬಜಾರ್ ಕಟ್ಟಡ, ಎರಡನೇ ಮಹಡಿ, ಜಿ.ಎಚ್.ಎಸ್ ರೋಡ್ ಮಂಗಳೂರು ದೂರವಾಣಿ ಸಂಖ್ಯೆ 0824-2951814 ಸಂಪರ್ಕಿಸುವಂತೆ ನಿಗಮದ ಪ್ರಕಟಣೆ ತಿಳಿಸಿದೆ.