(ನ್ಯೂಸ್ ಕಡಬ) newskadaba.com ಮಂಗಳೂರು, ನ. 24. ಅನೀಮಿಯ ಮುಕ್ತ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮಕ್ಕೆ ನವೆಂಬರ್ 22ರಂದು ಗುರುಪುರ ಪದವಿ ಪೂರ್ವ ಕಾಲೇಜಿನಲ್ಲಿ ಚಾಲನೆ ನೀಡಲಾಯಿತು.
ಗುರುಪುರ ಗ್ರಾಮ ಪಂಚಾಯತ್ ಅಧ್ಯಕ್ಷೆ ಸಫಾರ ನಾಸೀರ್ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಯಣ್ಣ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ. ಚಿರಾಗ್ ಉಪಸ್ಥಿತರಿದ್ದರು. ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ರಾಜೇಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಸದಾಶಿವ, ಕಾಲೇಜು ಪ್ರಾಂಶುಪಾಲರಾದ ಚಂದ್ರಶೇಖರ್, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಶವಂತ ಆಳ್ವ, ಆರ್.ಬಿ.ಎಸ್.ಕೆ ತಂಡದ ಡಾ. ಶಶಿರೇಖಾ, ವಿದ್ಯಾಲಕ್ಷ್ಮಿ, ಸರಿತಾ, ಮತ್ತು ಪ್ರಿಯಾಂಕ ಲೋಬೋ, ಪ್ರೌಢಶಾಲೆ ಮುಖ್ಯೋಪಾಧ್ಯಾಯರಾದ ಬಾಬು ಜಿಲ್ಲಾ ಶುಶ್ರೂಷಣಾಧಿಕಾರಿ ಲಿಸ್ಸಿ, ಡಿ.ಇ.ಐ.ಸಿ ವ್ಯವಸ್ಥಾಪಕಿ ಚೇತನಾ, ಸಮುದಾಯ ಆರೋಗ್ಯಾಧಿಕಾರಿ ಡೈಸಿ ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಗಿರೀಶ್ ಸ್ವಾಗತಿಸಿದರು. ವಯೋಲಾ ಸಿಕ್ವೇರಾ ನಿರೂಪಿಸಿದರು.