ಕಡಬದಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ – ಆತಂಕದಲ್ಲಿ ಜನತೆ

(ನ್ಯೂಸ್ ಕಡಬ) newskadaba.com ಕಡಬ, ಡಿ.01. ಪರಿಸರದಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು, ಕೃಷಿಕರು ಕಂಗೆಟ್ಟಿದ್ದಾರೆ.

ಶುಕ್ರವಾರ ಸಂಜೆ ವೇಳೆಗೆ ಕಡಬ ತಾಲೂಕಿನ ಐತ್ತೂರು ಗ್ರಾಮದ ಹತ್ಯಡ್ಕ ಕುದ್ರಡ್ಕ ಸಮೀಪ ತೋಟವೊಂದರಲ್ಲಿ ಕಾಡಾನೆ ಸಂಚರಿಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಳೆದ ಕೆಲವು ತಿಂಗಳುಗಳ ಹಿಂದೆ ಕಾಡಾನೆಯು ಇಬ್ಬರನ್ನು ಕೊಂದು ಹಾಕಿತ್ತು. ತದನಂತರ ಊರವರ ಒತ್ತಡಕ್ಕೆ ಮಣಿದ ಅರಣ್ಯ ಇಲಾಖೆಯು ಕಾಡಾನೆ ಸ್ಥಳಾಂತರ ಕಾರ್ಯಾಚರಣೆ ನಡೆಸಿದ್ದು, ಒಂದು ಆನೆಯನ್ನು ಸೆರೆ ಹಿಡಿದಿದ್ದರು.

Also Read  ಮನೆ ಹಿಂಬಾಗಿಲು ಮುರಿದು 3.48 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

error: Content is protected !!
Scroll to Top