ಕಡಬ: ಕಾರು – ಬೈಕ್ ನಡುವೆ ಢಿಕ್ಕಿ – ಶಾಲಾ ವಿದ್ಯಾರ್ಥಿ ಮೃತ್ಯು, ಇಬ್ಬರಿಗೆ ಗಾಯ

ಕಡಬ, ಡಿ.16. ಇಲ್ಲಿನ ಕಳಾರ ಸಮೀಪ ಶುಕ್ರವಾರ ತಡ ರಾತ್ರಿ ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಕಾಣಿಯೂರು ಮೂಲದ ಪ್ರಸ್ತುತ ಕಳಾರದಲ್ಲಿ ವಾಸವಿರುವ ಚಂದ್ರಶೇಖರ ಅವರ ಪುತ್ರ ,ಸರಸ್ವತಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಬಿಪಿನ್ ಮೃತಪಟ್ಟ ಬಾಲಕ.ತಮ್ಮ ನಿವಾಸಕ್ಕೆ ತಲುಪುವ ಸುಮಾರು ನೂರು‌ ಮೀಟರ್ ಅಂತರದಲ್ಲಿ ಈ ಅಪಘಾತ ನಡೆದಿದೆ
ಈ ಅಪಘಾತದಲ್ಲಿ ಮೃತ ಬಾಲಕನ ತಂದೆ ಚಂದ್ರಶೇಖರ ಮತ್ತು ಪುಟಾಣಿ ತಂಗಿ ಗಂಭೀರ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸರಸ್ವತಿ ಶಾಲೆಯಲ್ಲಿ ನಡೆದಿದ್ದ ಕ್ರೀಡೋತ್ಸೋವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಮೃತ ಬಾಲಕನ ಮರಣೋತ್ತರ ಪರೀಕ್ಷೆ ಕಡಬ ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

Also Read  ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ► ಧರ್ಮಸ್ಥಳದಲ್ಲಿ ನಡೆದ ಹೃದಯ ವಿದ್ರಾವಕ ಘಟನೆ

ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಕಾರು ಚಾಲಕ ಪಂಜ ಸಮೀಪದ ಪರಮೇಶ್ವರ ಎಂಬವರ ಅವಾಂತರಕ್ಕೆ ಬಾಲಕ ಪ್ರಾಣ ಕಳೆದುಕೊಳ್ಳುವಂತಾಗಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಕಡಬ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!
Scroll to Top