ಕಬಕ: ಬಸ್ – ಸ್ಕೂಟರ್ ನಡುವೆ ಢಿಕ್ಕಿ – ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.16. ಬಸ್ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ‌ ನಗರದ ಹೊರವಲಯದ ಕಬಕ‌ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.

ಮೃತ ಯುವಕನನ್ನು ಬಿ.ಸಿ.ರೋಡ್ ಕೈಕಂಬ ನಿವಾಸಿ ಆಶಿಕ್ ಎಂದು ಗುರುತಿಸಲಾಗಿದೆ. ಕಬಕ ಕೂವೆಹಿತ್ತಿಲು ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ ಹಾಗೂ ಸ್ಕೂಟರ್ ನಡುವೆ ಅಪಘಾತ ಉಂಟಾಗಿ ಈ ದುರ್ಘಟನೆ ಸಂಭವಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Scroll to Top