ಆಲಂಕಾರು: ಎಂಡೋಸಲ್ಫಾನ್ ಸಂತ್ರಸ್ತರ ಉಚಿತ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ, ಡಿ. 20. ದ.ಕ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಪುತ್ತೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಯಿಲ ಹಾಗೂ ಆಲಂಕಾರು ಗ್ರಾಮ ಪಂಚಾಯತ್‌ನ ಸಹಯೋಗದೊಂದಿಗೆ ಎಂಡೋ ಸಲ್ಫಾನ್ ಸಂತ್ರಸ್ಥರ ಮತ್ತು ವಿಕಲಚೇತನರ ಉಚಿತ ಆರೋಗ್ಯ ತಪಾಸಣಾ ಶಿಬಿರವು ಮಂಗಳವಾರದಂದು ಆಲಂಕಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಯ ತಜ್ಞ ವೈದ್ಯರು ಆರೋಗ್ಯ ತಪಾಸಣೆ ಮಾಡಿ ಸೂಕ್ತ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿದರು. ಆಲಂಕಾರು, ಪೆರಾಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಂಡೋಪೀಡಿತರು ಹಾಗೂ ವಿಕಲಚೇತನರು, ಪೋಷಕರು ಶಿಬಿರದ ಪ್ರಯೋಜನ ಪಡೆದುಕೊಂಡರು. ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸರೋಜಿನಿ, ಲೀಲಾವತಿ, ಮೋಹನಾಂಗಿ, ಸಮುದಾಯ ಆರೋಗ್ಯ ಅಧಿಕಾರಿ ಯಶ್ಮಿತಾ, ಸಂಧ್ಯಾ, ಆಲಂಕಾರು, ಪೆರಾಬೆ, ಕುಂತೂರು ಗ್ರಾಮದ ಆಶಾ ಕಾರ್ಯಕರ್ತೆಯರು, ವಿಕಲಚೇತನರ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಆಲಂಕಾರು ಗ್ರಾ.ಪಂ.ನ ಮೋನಪ್ಪ ಬರೆಪುದೇಲು, ಪೆರಾಬೆ ಗ್ರಾ.ಪಂ.ನ ಮುತ್ತಪ್ಪ ಬಿ. ಸಹಕರಿಸಿದರು.

Also Read  ಜುಲೈ 02.ರಿಂದ ಕಡಬದ ಸಾಹಿರಾ ಡ್ರೆಸ್ ಪ್ಯಾಲೇಸ್ ನಲ್ಲಿ ಸ್ಟಾಕ್ ಕ್ಲಿಯರೆನ್ಸ್ ಸೇಲ್

error: Content is protected !!
Scroll to Top