ಪುತ್ತೂರು: ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, . 02. ವ್ಯಕ್ತಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಣಾಜೆ ಗ್ರಾಮದ ಆರ್ಲಪದವು ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಪಾಣಾಜೆ ಗ್ರಾಮದ ಆರ್ಲಪದವು ನಿವಾಸಿ, ಮೇಸ್ತ್ರಿ ಕಂ ಗುತ್ತಿಗೆದಾರ ವಿಜಯ್ ಕುಮಾರ್ (38) ಎಂದು ಗುರುತಿಸಲಾಗಿದೆ. ವಿಜಯ್ ಕುಮಾರ್ ಅವರಿಗೆ ವಿವಾಹ ನಡೆಸಲು ಮನೆಯವರು ಸಿದ್ಧತೆ ನಡೆಸಿಕೊಂಡಿದ್ದರು ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Scroll to Top