ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್‌ಗೆ ನುಗ್ಗಿದ ಆಂಬ್ಯುಲೆನ್ಸ್..!

(ನ್ಯೂಸ್ ಕಡಬ) newskadaba.com ಮಣಿಪಾಲ, . 02. ಚಾಲಕನ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್ ವಾಹನವೊಂದು ಮೆಡಿಕಲ್ ಶಾಪ್ ಒಳಗೆ ನುಗ್ಗಿದ ಘಟನೆ ಲಕ್ಷ್ಮೀಂದ್ರ ನಗರದ ಬಳಿ ನಡೆದಿದೆ.

ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಆಂಬುಲೆನ್ಸ್ ನಲ್ಲಿ ಚಾಲಕ ಮಾತ್ರ ಇದ್ದು, ಲಕ್ಷ್ಮೀಂದ್ರ ನಗರದ ಬಳಿ ತಲುಪುತ್ತಿದ್ದಂತೆಯೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಒಮ್ಮೆಲೇ ಬಲಕ್ಕೆ ತಿರುಗಿದ ಆಂಬ್ಯುಲೆನ್ಸ್, ರಸ್ತೆಯ ಪಕ್ಕದಲ್ಲಿದ್ದ ಜನೌಷಧಿ ಕೇಂದ್ರದೊಳಗೆ ನುಗ್ಗಿದ್ದು, ಪಕ್ಕದ ಅಂಗಡಿಗಳಿಗೂ ಹಾನಿಯಾಗಿದೆ. ಇನ್ನು ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

error: Content is protected !!
Scroll to Top