ಹೊಸವರ್ಷಾಚರಣೆಯ ವೇಳೆ ಗಲಾಟೆ- ಓರ್ವನ ಮೂಗು ಕತ್ತರಿಸಿದ ಸ್ನೇಹಿತ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, . 02 . ಹೊಸವರ್ಷದ ಸಂಭ್ರಮಾಚರಣೆಯ ಸಂದರ್ಭ ಯುವಕರ ನಡುವೆ ಗಲಾಟೆಯಾಗಿ ಓರ್ವ ತನ್ನ ಗೆಳೆಯನ ಮೂಗನ್ನೇ ಕಚ್ಚಿ ತುಂಡರಿಸಿದ ಘಟನೆ ಬೆಳ್ತಂಗಡಿಯ ಪಿಲ್ಯ ಎಂಬಲ್ಲಿ ನಡೆದಿದೆ.

ಗಾಯಗೊಂಡ ಯುವಕನನ್ನು ಪಿಲ್ಯ ಗ್ರಾಮದ ಉಲ್ಪೆ ಎಂಬಲ್ಲಿನ ನಿವಾಸಿ ದೀಕ್ಷಿತ್‌ (28) ಎಂದು ಗುರುತಿಸಲಾಗಿದೆ. ಮೂಡಿಗೆರೆ ನಿವಾಸಿ ರಾಕೇಶ್ ಎಂಬ ಯುವಕ ಪ್ರಸ್ತುತ ಪಿಲ್ಯ ಗ್ರಾಮದ ಸಂಬಂಧಿಕರ ಮನೆಯಲ್ಲಿ ವಾಸವಿದ್ದು, ಸ್ಥಳೀಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದನು. ಆದರೆ ಹೊಸ ವರ್ಷಾಚರಣೆ ಸಂದರ್ಭ ಮದ್ಯ ಸೇವಿಸಿ ಕ್ಷುಲ್ಲಕ ವಿಚಾರದಲ್ಲಿ ಸ್ನೇಹಿತರ ನಡುವೆ ಗಲಾಟೆ ನಡೆದಿತ್ತು. ಬಳಿಕ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಈ ವೇಳೆ ದೀಕ್ಷಿತ್ ನ ಮೂಗನ್ನು ರಾಕೇಶ್ ಬಲವಾಗಿ ಕಚ್ಚಿ ತುಂಡರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗಂಭೀರ ಗಾಯಗೊಂಡ ದೀಕ್ಷಿತ್‌ನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಘಟನೆಯ ಬಗ್ಗೆ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Also Read  ಪುತ್ತೂರು: ಬೈಕ್ ಢಿಕ್ಕಿ- ಬಾಲಕನಿಗೆ ಗಾಯ ➤ ಮಾನವೀಯತೆ ಮೆರೆದ ಕಾಂಗ್ರೆಸ್ ವಲಯಾಧ್ಯಕ್ಷ

error: Content is protected !!
Scroll to Top