(ನ್ಯೂಸ್ ಕಡಬ) newskadaba.com ವಿಟ್ಲ, ಜೂ.25. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ಕಾರು ಹಾಗೂ ಟ್ಯಾಂಕರ್ ಢಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಉಪ್ಪಿನಂಗಡಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಮತ್ತು ಬೆಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ನಡುವೆ ಮುಖಾಮುಖಿಯಾಗಿ ಈ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಬೆಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರು-ಟ್ಯಾಂಕರ್ ಢಿಕ್ಕಿ: ನಾಲ್ವರು ಗಂಭೀರ
