ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ – ಕರಾವಳಿಯಿಂದ ನೇರ ರೈಲು ಸಂಪರ್ಕ ಕಲ್ಪಿಸಲು ಮನವಿ

(ನ್ಯೂಸ್ ಕಡಬ) newskadaba.com ಉಡುಪಿ, . 10. ಅಯೋಧ್ಯೆಯಲ್ಲಿ ನಿರ್ಮಾಣವಾದ ರಾಮ ಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆಯು ಜ. 22 ರಂದು ನೆರವೇರಲಿದ್ದು, ಈ ಅದ್ಭುತ ಕ್ಷಣದಲ್ಲಿ ಸಾವಿರರು ಭಕ್ತರು ಪಾಲ್ಗೊಳ್ಳಲಿದ್ದಾರೆ. ಆದರೆ ಕರಾವಳಿ ಭಾಗದಿಂದ ಅಯೋಧ್ಯೆಗೆ ತೆರಳುವ ಭಕ್ತರಿಗೆ ಯಾವುದೇ ನೇರ ರೈಲು ಸೇವೆಗಳು ಇಲ್ಲದಿರುವುದರಿಂದ ಕರಾವಳಿ ಜನತೆಯ ಬೇಸರಕ್ಕೆ ಕಾರಣವಾಗಿದೆ.

ಇದಕ್ಕಾಗಿ ಭಾರತೀಯ ರೈಲ್ವೆಯು ಈಗಾಗಲೇ ಭಕ್ತರ ಅನುಕೂಲಕ್ಕಾಗಿ ದೇಶದ ವಿವಿಧ ಭಾಗಗಳಿಂದ ಅಯೋಧ್ಯೆಗೆ ನೇರ ರೈಲು ಸಂಪರ್ಕವನ್ನು ಆರಂಭಿಸಿದೆ. ಕರ್ನಾಟಕದಲ್ಲಿ ಮೈಸೂರು, ಹುಬ್ಬಳ್ಳಿ ಮತ್ತು ಬೆಂಗಳೂರು ಮೂಲಕ ಅಯೋಧ್ಯೆಗೆ ರೈಲು ಸಂಪರ್ಕಿಸಲು ಉದ್ದೇಶಿಸಿದೆ. ಆದರೆ, ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಂದ ಅಯೋಧ್ಯೆ ಯಾತ್ರೆ ಕೈಗೊಳ್ಳುವ ಭಕ್ತರಿಗೆ ನೇರ ಸಂಪರ್ಕ ವ್ಯವಸ್ಥೆ ಇಲ್ಲದ ಕಾರಣ ಕರಾವಳಿ ಭಾಗದವರು ಮುಂಬಯಿಗೆ ತೆರಳಿ ಅಲ್ಲಿಂದ ಅಯೋಧ್ಯೆಗೆ ತೆರಳಬೇಕು. ಇಲ್ಲವೇ ಬೆಂಗಳೂರಿಗೆ ತೆರಳಿ ರೈಲುಗಳನ್ನು ಹಿಡಿಯಬೇಕು. ಇದರಿಂದ ಸಮಯ ವ್ಯರ್ಥದ ಜೊತೆಗೆ ವೆಚ್ಚವು ಹೆಚ್ಚಳವಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

error: Content is protected !!
Scroll to Top