ಮರಳು ಸಾಗಾಟ ಪ್ರಕರಣ – ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

crime, arrest, suspected

(ನ್ಯೂಸ್ ಕಡಬ) newskadaba.com ಬಂಟ್ವಾಳ, . 10. ಮರಳು ಸಾಗಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಠಾಣಾ ಪೊಲೀಸರು ನರಿಂಗಾನ ಗ್ರಾಮದ ಕೆದಂಬಾಡಿ ಜಂಕ್ಷನ್ ನಲ್ಲಿ ಬಂಧಿಸಿದ ಕುರಿತು ವರದಿಯಾಗಿದೆ.

 

ಬಂಧಿತ ಆರೋಪಿಯನ್ನು ಬಂಟ್ವಾಳ ನರಿಂಗಾನ ನಿವಾಸಿ, ಸಿದ್ಧೀಕ್ ಕೆ.ಎಂ.ಎಂದು ಗುರುತಿಸಲಾಗಿದೆ. ಸಿದ್ಧೀಕ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಕ್ರ:126/2017 ಕಲಂ:379 r/w 34 ಐಪಿಸಿ ಪ್ರಕರಣ ದಾಖಲಾಗಿತ್ತು. ಸಿದ್ಧೀಕ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಯು ತಪ್ಪು ಒಪ್ಪಿಕೊಂಡಿದ್ದು, ನ್ಯಾಯಾಲಯವು ರೂ. 11.000/- ದಂಡವನ್ನು ವಿಧಿಸಿರುತ್ತದೆ. ಕಾರ್ಯಾಚರಣೆಯಲ್ಲಿ ವಿಟ್ಲ ಠಾಣಾ ಎಎಸ್ಐ ಜಯರಾಮ ಹಾಗೂ ಸಿಬ್ಬಂದಿಗಳಾದ ಪುನೀತ್, ಹೇಮರಾಜ್, ಆಶೋಕ್ ಭಾಗವಹಿಸಿದ್ದರು.

Also Read  ಸುಬ್ರಹ್ಮಣ್ಯ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ

 

error: Content is protected !!
Scroll to Top