ಎದೆಹಾಲು ಗಂಟಲಲ್ಲಿ ಸಿಲುಕಿ 3 ತಿಂಗಳ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂಬಳೆ, . 10. ತಾಯಿಯ ಎದೆ ಹಾಲು ಗಂಟಲಲ್ಲಿ ಸಿಲುಕಿ ಮೂರು ತಿಂಗಳು ಮಗುವೊಂದು ಮೃತಪಟ್ಟ ಘಟನೆ ಬಂಬ್ರಾಣದಲ್ಲಿ ನಡೆದಿದೆ.

ಮೃತ ಮಗುವನ್ನು ಮೂಲತಃ ಈಶ್ವರಮಂಗಲ ನಿವಾಸಿ, ಪ್ರಸ್ತುತ ಬಂಬ್ರಾಣದಲ್ಲಿ ನೆಲೆಸಿದ್ದ ಅಬ್ದುಲ್ ಅಝೀಝ್ ಹಾಗೂ ಖದೀಜಾ ದಂಪತಿಯ ಪುತ್ರಿ, ಮೂರು ತಿಂಗಳ ಅಯಿಶಾ ಮೆಹ್ರಾ ಎಂದು ಗುರುತಿಸಲಾಗಿದೆ. ಮಲಗಿಕೊಂಡು ಎದೆಹಾಲು ಕುಡಿಯುತ್ತಿದ್ದ ಮಗು ರಾತ್ರಿ ಎಷ್ಟೇ ಹೊತ್ತಾದರೂ ಎಚ್ಚರಗೊಳ್ಳದೆ ಇದ್ದಾ ಗ ಕುಂಬಳೆಯ ಖಾಸಗಿ ಆಸ್ಪತ್ರೆ ಗೆ ಕರೆದುಕೊಂಡು ಹೋಗಿದ್ದು , ಅದಾಗಲೇ ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಸ್ಥಳಕ್ಕೆ ಕುಂಬಳೆ ಪೊಲೀಸರು ಭೇಟಿ ನೀಡಿದ್ದಾರೆ.

Scroll to Top