ಜ. 22ರಂದು ರಾಮಮಂದಿರ ಉದ್ಘಾಟನೆ- ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಲಕ್ನೋ, ಜ. 10. ರಾಮಮಂದಿರ ಉದ್ಘಾಟನೆಗೆ ಬೆರಳೆಣಿಕೆಯ ದಿನಗಳಷ್ಟೇ ಬಾಕಿಯಿದ್ದು, ಶ್ರೀರಾಮನ ಪ್ರಾಣಪ್ರತಿಷ್ಠೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು ಆಯೋಧ್ಯೆಯು ಬಣ್ಣಬಣ್ಣಗಳಿಂದ ಸಿಂಗಾರಗೊಳ್ಳುತ್ತಿದೆ. ರಾಮಮಂದಿರ ಉದ್ಘಾಟನೆಯ ಹಿನ್ನೆಲೆ ಜನವರಿ 22ರಂದು ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ರಜೆ ಘೋಷಿಸಿದ್ದಾರೆ.

ಈಗಾಗಲೇ ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯಂದು ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಜನವರಿ 22ರಂದು ಎಲ್ಲಾ ಸರ್ಕಾರಿ ಕಟ್ಟಡಗಳನ್ನು ಅಲಂಕರಿಸಲು ಮತ್ತು ಪಟಾಕಿಗಳ ವ್ಯವಸ್ಥೆಯನ್ನು ಮಾಡಲು ಆದಿತ್ಯನಾಥ್ ಕರೆ ನೀಡಿದ್ದಾರೆ.

Also Read  ಔಷಧಗಳ ಬೆಲೆ ಶೇ.12.12ರಷ್ಟು ಹೆಚ್ಚಳ      ➤ ಏಪ್ರಿಲ್ 1ರಿಂದಲೇ ಜಾರಿ

error: Content is protected !!
Scroll to Top