(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 10. ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕೆ ಬಹುಭಾಷಾ ನಟಿ ಪ್ರಣೀತಾ ಸುಭಾಷ್ ರವರು1 ಲಕ್ಷ ರೂ.ಗಳ ದೇಣಿಗೆ ನೀಡುವ ಮೂಲಕ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಅಯೋಧ್ಯೆಯ ರಾಮಮಂದಿರದ ನಿಧಿ ಸಮರ್ಪಣ ಅಭಿಯಾನವನ್ನು ಬೆಂಬಲಿಸಿದ ನಟಿ 1 ಲಕ್ಷ ರೂ. ಹಣವನ್ನು ನೀಡಿ, ಇದೊಂದು ಐತಿಹಾಸಿಕ ಚಳುವಳಿ ಎಂದು ಬರೆದು ನಟಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ ಎನ್ನಲಾಗಿದೆ.