ಬೆಳ್ಳಾರೆ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಳ್ಳಾರೆ, . 11.  ಪೋಕ್ಸೋ ಪ್ರಕರಣದಲ್ಲಿ ಭಾಗಿಯಾಗಿ, ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ.

ಬಂಧಿತನನ್ನು ಸುಳ್ಯ ಕಳಂಜ ಗ್ರಾಮದ ನಿವಾಸಿ ರಾಜೇಶ ಎಂದು ಗುರುತಿಸಲಾಗಿದೆ. ಈತನ ವಿರುದ್ದ 2019 ರಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಯನ್ನು ಕಳಂಜ ಗ್ರಾಮದ ಕಿಲಂಗೋಡಿ ಎಂಬಲ್ಲಿ ಅರೆಸ್ಟ್ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಕಾರ್ಯಾಚರನೆಯಲ್ಲಿ ಬೆಳ್ಳಾರೆ ಠಾಣಾ ಪಿಎಸ್ಐ ಅಶೋಕ್ ಸಿ ಎಮ್ ಹಾಗೂ ಸಿಬ್ಬಂದಿಗಳಾದ ಪ್ರವೀಣ ಬಾರ್ಕಿ ಮತ್ತು ಸಂತೋಷ್ ಕೆ ಜಿ ಭಾಗವಹಿಸಿದ್ದರು.

Also Read  'ಉಗ್ರ ಸಂಘಟನೆ ಲಷ್ಕರ್' ಪರ ಬರಹ ➤ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

error: Content is protected !!
Scroll to Top