ರಾಮಮಂದಿರ ಉದ್ಘಾಟನೆ- ಜ. 22ರಂದು ಸರಕಾರಿ ರಜೆ

(ನ್ಯೂಸ್ ಕಡಬ) newskadaba.com ಪಣಜಿ, . 11. ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠೆ ದಿನದ ಅಂಗವಾಗಿ ಗೋವಾ ರಾಜ್ಯ ಸರ್ಕಾರವು ಸರ್ಕಾರಿ ರಜೆ ಎಂದು ಘೋಷಿಸಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಪರ್ವರಿಯ ಸಚಿವಾಲಯದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಸಾವಂತ್ ಸುದ್ದಿಗಾರರೊಂದಿಗೆ ಮಾತನಾಡಿ, ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆಯ ದಿನ ಜ. 22 ರಂದು ಸರ್ಕಾರಿ ರಜೆ ಎಂದು ರಾಜ್ಯ ಸರ್ಕಾರ ಘೋಷಿಸಿದೆ ಎಂದು ಹೇಳಿದ್ದಾರೆ. ಅಲ್ಲದೇ ರಜೆಯು ಸರ್ಕಾರಿ ಕಚೇರಿಗಳು ಮತ್ತು ಶಾಲೆಗಳಿಗೆ ಮಾತ್ರ ರಜೆ ಅನ್ವಯಿಸುತ್ತದೆ. ಆದರೆ ಖಾಸಗಿ ವಲಯಕ್ಕೆ ಮಾನ್ಯವಾಗಿಲ್ಲ ಎಂದು ಅವರು ಹೇಳಿದರು.

Also Read  ಮುಂಬೈ: ಭಯೋತ್ಪಾದಕ ದಾಳಿ ಎಚ್ಚರಿಕೆ-ಪೊಲೀಸರಿಂದ ಹೈ ಅಲರ್ಟ್

error: Content is protected !!
Scroll to Top