ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿದ ಮುಸುಕುದಾರಿಗಳು – ತಾಯಿ ಮಗಳನ್ನು ಬೆದರಿಸಿ ನಗ-ನಗದು ದರೋಡೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, . 11. ಮನೆಯೊಂದರ ಒಳಗೆ ಬಂದ ನಾಲ್ವರು ಮುಸುಕುಧಾರಿಗಳು ಮನೆಯಲ್ಲಿದ್ದ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂ ನಗ-ನಗದನ್ನು ಕಳವುಗೈದ ಘಟನೆ ಗುರುವಾರದಂದು ಬೆಳ್ಳಂಬೆಳಗ್ಗೆ ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೀ ಪಾರ್ಕ್ ಮುಂಭಾಗದಲ್ಲಿ ನಡೆದಿದೆ.

ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೋ ಹಾಗೂ ಮಗಳು ಮರಿನಾ ಪಿಂಟೋ ಇಬ್ಬರೇ ಇದ್ದ ಸಂದರ್ಭ ಮನೆಗೆ ನುಗ್ಗಿದ ಕಳ್ಳರು, ಗೊದ್ರೇಜ್ ನಲ್ಲಿರಿಸಲಾಗಿದ್ದ ಸುಮಾರು 2.90 ಲಕ್ಷ ರೂ. ಮೌಲ್ಯದ ವಿವಿಧ ಚಿನ್ನಾಭರಣ, 30 ಸಾವಿರ ನಗದು ಹಾಗೂ ಒಂದು ಮೊಬೈಲ್ ಪೋನ್ ಸೇರಿದಂತೆ ಒಟ್ಟು ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ನಗ-ನಗದನ್ನು ಕಳವುಗೈದಿದ್ದಾರೆ. ಇಂದು ಬೆಳಿಗ್ಗೆ ಸುಮಾರು 6.30ರ ಸಮಯದಲ್ಲಿ ಕಳ್ಳರು ಮನೆಯ ಬೆಲ್ ಹಾಕಿದ್ದು, ಬಾಗಿಲು ತೆರೆದಾಗ ನಾಲ್ವರು ಮುಸುಕುದಾರಿಗಳು ಮನೆಯೊಳಗೆ ನುಗ್ಗಿದ್ದಾರೆ. ಬಳಿಕ ಮನೆಯಲ್ಲಿರುವ ನಗ-ನಗದನ್ನು ಕೊಡುವಂತೆ ಬೆದರಿಸಿದ್ದಾರೆ. ಬೆದರಿಕೆಗೆ ಬಗ್ಗದೇ ಇದ್ದಾಗ ನಾಲ್ವರು ಕೈಯಲ್ಲಿದ್ದ ಚೂರಿ ತೋರಿಸಿ ಕೊಲ್ಲುವ ಬೆದರಿಕೆ ಒಡ್ಡಿದಾಗ ಗೊದ್ರೇಜ್ ಬೀಗದ ಕೀ ನೀಡಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್ ಹಾಗೂ ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Also Read  4 Methods to Alter Product Key to Activate Home Windows Q0

error: Content is protected !!
Scroll to Top