ಗರ್ಭಿಣಿಯಾದ 9ನೇ ತರಗತಿ ಬಾಲಕಿ- ಹಾಸ್ಟೆಲ್ ವಾರ್ಡನ್ ಅಮಾನತು

(ನ್ಯೂಸ್ ಕಡಬ) newskadaba.com ತುಮಕೂರು, ಜ. 11. 9ನೇ ತರಗತಿಯಲ್ಲಿ ಕಲಿಯುತ್ತಿದ್ದ ಹಾಸ್ಟೆಲ್ ವಿದ್ಯಾರ್ಥಿನಿಯೋರ್ವಳು ಗರ್ಭಿಣಿಯಾದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದಲ್ಲಿ ನಡೆದಿದೆ.

ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ‌‌ ನಿವಾಸಿಯಾಗಿರುವ ಬಾಲಕಿ ಮಧುಗಿರಿ ಪಟ್ಟಣದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿದ್ದು, 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಈಕೆ ತಾಯಿಯ ಜೊತೆಗೆ ಬಾಗೆಪಲ್ಲಿ ಆಸ್ಪತ್ರೆಗೆ ತೆರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಈಕೆ ಏಳು ತಿಂಗಳ ಗರ್ಭಿಣಿಯಾಗಿದ್ದು, ಬಾಲಕಿಯ ದೇಹದ ಬದಲಾವಣೆಯನ್ನು ವಾರ್ಡನ್ ಗಮನಿಸದ ಕಾರಣ ಹಾಸ್ಟೆಲ್ ವಾರ್ಡನ್ ನನ್ನು ಪಂಚಾಯತ್ ಸಿಇಒ‌ ಜಿ.ಪ್ರಭು ಅಮಾನತು ಆದೇಶ ಹೊರಡಿಸಿದ್ದಾರೆ ಎನ್ನಲಾಗಿದೆ.

Also Read  ಇಂದು ಕಡಬದಲ್ಲಿ ಉಚಿತ ಕೊವೀಡ್ -19 ಪರೀಕ್ಷೆ

error: Content is protected !!
Scroll to Top