ರಾಜ್ಯಾದ್ಯಂತ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ಆರೋಗ್ಯಾಧಿಕಾರಿಗಳ ದಾಳಿ – 156 ನಕಲಿ ವೈದ್ಯರು ಪತ್ತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 11. ಇಡೀ ದೇಶವೇ ಬೆಚ್ಚಿಬೀಳಿಸುವಂತಹ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ರಾಜ್ಯಾದ್ಯಂತ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ದಾಳಿ ನಡೆಸಿ, ಅನೇಕ ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಬೀಗ ಹಾಕಿ ನೋಟಿಸ್ ಜಾರಿ ಮಾಡಿತ್ತು. ಇದೀಗ ಆರೋಗ್ಯ ಅಧಿಕಾರಿಗಳು ರಾಜ್ಯಾದ್ಯಂತ ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇದರಿಂದಾಗಿ ಬರೋಬ್ಬರಿ 34 ಸ್ಕ್ಯಾನಿಂಗ್ ಸೆಂಟರ್ ಗಳನ್ನು ಜಪ್ತಿ ಮಾಡಿದ್ದಾರೆ. 469 ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಆರೋಗ್ಯ ಇಲಾಖೆ ನೋಟಿಸ್ ಜಾರಿಗೊಳಿಸಿದೆ. ಅಧಿಕಾರಿಗಳ ದಾಳಿಯ ವೇಳೆ 156 ನಕಲಿ ವೈದ್ಯರು ಪತ್ತೆಯಾಗಿದ್ದಾರೆ ಎನ್ನಲಾಗಿದೆ.


ದಾಳಿಯಲ್ಲಿ ಬೆಂಗಳೂರಿನ ಗ್ರಾಮೀಣ ಭಾಗದಲ್ಲಿ ಅತೀ ಹೆಚ್ಚು ಸ್ಕ್ಯಾನಿಂಗ್ ಸೆಂಟರ್ ಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಮೈಸೂರಿನಲ್ಲಿ ನಡೆದಂತಹ ಭ್ರೂಣ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಸ್ಕ್ಯಾನಿಂಗ್ ಸೆಂಟರ್ ಗಳ ಕಳ್ಳಾಟವನ್ನು ಬಯಲಿಗೆಳೆಯಲು ಇಲಾಖೆ ಮುಂದಾಗಿತ್ತು. ಮೈಸೂರಿನ ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಅಧಿಕಾರಿಗಳು ರಾಜ್ಯಾದ್ಯಂತ ದಾಳಿಗೆ ಮುಂದಾಗಿದ್ದರು. ಡಿಸೆಂಬರ್ 31ರ ಒಳಗೆ ರಾಜ್ಯದ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದರು.

Also Read  ಅನ್ನಭಾಗ್ಯ- ಬಿಪಿಎಲ್ ದಾರರಿಗೆ ಹಣದ ಬದಲು ರಾಗಿ ಮತ್ತು ಗೋಧಿ ಕಿಟ್..!

ಅಕ್ರಮ ಸ್ಕ್ಯಾನಿಂಗ್ ಸೆಂಟರ್ ವಿರುದ್ಧ ಕ್ರಮವಹಿಸಿ ವರದಿ ನೀಡಲು ಎಲ್ಲಾ ಡಿಎಚ್‌ಓ ಹಾಗೂ ಸಿಹೆಚ್ಓ ಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿತ್ತು. ಒಟ್ಟು 583 ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ಸಂದರ್ಭ 156 ನಕಲಿ ವೈದ್ಯರು ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

Also Read  ತೊಗರಿ ಬೆಳೆ ರೋಗ; ರೈತರಿಗೆ 10,000 ಪರಿಹಾರ ಘೋಷಣೆ  ➤  ಸಿಎಂ ಬೊಮ್ಮಾಯಿ                                

error: Content is protected !!
Scroll to Top