ಗಣರಾಜ್ಯ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಸೇರಿಸಿ – ರಕ್ಷಣಾ ಸಚಿವರಿಗೆ ಸಿಎಂ ಪತ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, . 12. ಕರ್ನಾಟಕ ರಾಜ್ಯದ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಸೇರಿಸುವಂತೆ ವಿನಂತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರಿಗೆ ಇಂದು ಪತ್ರ ಬರೆದಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪತ್ರವನ್ನು ಪೋಸ್ಟ್ ಮಾಡಿರುವ ಅವರು, “ನಾನು ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರಿಗೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಸೇರಿಸಲು ವಿನಂತಿಸಿ ಪತ್ರ ಬರೆದಿದ್ದೇನೆ. 7 ಕೋಟಿ ಕನ್ನಡಿಗರ ಆಳವಾದ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ. ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ನಿರಾಕರಿಸುವುದು ಕೇವಲ ಪ್ರಮಾದವಲ್ಲ. ಇದು ನಮ್ಮ ರಾಜ್ಯದ ಘನತೆಗೆ ಧಕ್ಕೆಯಾಗಿದೆ. ನಮ್ಮ ಸಾಧನೆಗಳು ರಾಷ್ಟ್ರೀಯ ವೇದಿಕೆಗೆ ಅರ್ಹವಾಗಿದೆ” ಎಂದು ಬರೆದಿದ್ದಾರೆ.

Also Read  ಸಿಎಂ ಕುಮಾರಸ್ವಾಮಿ ಬಜೆಟ್ ನಲ್ಲಿ ಅನ್ನದಾತನಿಗೆ ಬಂಪರ್ ಕೊಡುಗೆ

error: Content is protected !!
Scroll to Top