ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನರ್ಸರಿ ಸ್ಥಾಪನೆ- ಸ್ಥಳ ಪರಿಶೀಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, . 12. ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ಸಸಿಗಳ ಮಾರಾಟದ ಹಿನ್ನೆಲೆ ನರ್ಸರಿ ಸ್ಥಾಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಕಾರಾಗೃಹದ ಮುಂಭಾಗದ ಆವರಣದಲ್ಲಿ ನರ್ಸರಿ ಸ್ಥಾಪನೆಗೆ ಸೂಕ್ತ ಸ್ಥಳ ಎಂದು ಅಂತಿಮಗೊಳಿಸಲಾಗಿದೆ.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಆನಂದ್, ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ, ತೋಟಗಾರಿಕಾ ಉಪನಿರ್ದೇಶಕ ಎಚ್.ಆರ್. ನಾಯಕ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ಕಾರಾಗ್ರಹ ಅಧೀಕ್ಷಕ ಬಿ.ಟಿ. ಓಬಳೇಶಪ್ಪ ಉಪಸ್ಥಿತರಿದ್ದರು. ಜಿಲ್ಲಾ ಕಾರಾಗೃಹದಲ್ಲಿ ಬಂಧಿತರಾಗಿರುವ ಕೈದಿಗಳು ವಿವಿಧ ರೀತಿಯ ಹಣ್ಣು, ತರಕಾರಿ, ಅಲಂಕಾರಿಕ ಗಿಡಗಳನ್ನು ಬೆಳೆಸಿದ್ದಾರೆ. ಕಾರಾಗೃಹದ ಹಿಂಭಾಗದ ಖಾಲಿ ಜಾಗದಲ್ಲಿ ಉತ್ತಮ ನೀರಿನ ವ್ಯವಸ್ಥೆಯೊಂದಿಗೆ ಗಿಡಮರಗಳನ್ನು ಬೆಳೆಸಲಾಗಿದೆ. ಬುಧವಾರದಂದು ಕಾರಾಗೃಹದಲ್ಲಿ ಕನ್ನಡ ಸಂಸ್ಕೃತಿ ಇಲಾಖೆಯಿಂದ ಏರ್ಪಡಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿಗಳು ಗಿಡಮರಗಳ ನರ್ಸರಿ ವೀಕ್ಷಿಸಿ, ಅತೀವ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಅಲ್ಲದೇ ಸಸಿಗಳ ಮಾರಾಟಕ್ಕೆ ನರ್ಸರಿ ಸ್ಥಾಪಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದರು.

Also Read  ಉಳ್ಳಾಲದಲ್ಲಿ ಡಯಾಲಿಸಿಸ್ ಕೇಂದ್ರ - ಅರ್ಜಿ ಸಲ್ಲಿಸಲು ರೋಗಿಗಳಿಗೆ ಸೂಚನೆ

error: Content is protected !!
Scroll to Top