ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿವೇಕಾನಂದ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, . 12. ಇಲ್ಲಿನ ಹನುಮಾನ್‍ನಗರ ಕೇವಳದಲ್ಲಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಹಾಗೂ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಂಟಿಯಾಗಿ ಜನವರಿ 12ರಂದು ವಿವೇಕಾನಂದ ಜಯಂತಿಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಕೌಶಿಕ್, ಸಿಂಚನಾ ಕೆ ಎಸ್ ಹಾಗೂ ಆದಿತ್ಯ ಕೆ ವಿ ಗೌಡ ಇವರು ವಿವೇಕಾನಂದರ ಕುರಿತು ಮಾತನಾಡಿದರು. ಶಿಕ್ಷಕಿ ಶ್ರೀಮತಿ ಸೌಮ್ಯ ಕೆ.ಎ ಇವರು ವಿವೇಕಾನಂದರ ಜೀವನದಲ್ಲಿ ಆದ ಘಟನೆಗಳನ್ನು ತಿಳಿಸಿ ಅವರು ಯುವ ಜನಾಂಗಕ್ಕೆ ಪ್ರೇರಣಾ ಶಕ್ತಿಯಾಗಿದ್ದರು ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ವಿವೇಕಾನಂದರ ಜೀವನ ಚರಿತ್ರೆಯನ್ನು ದೃಶ್ಯ ಮಾಧ್ಯಮದ ಮೂಲಕ ವಿದ್ಯಾರ್ಥಿಗಳಿಗೆ ತೋರಿಸಲಾಯಿತು. ವೇದಿಕೆಯಲ್ಲಿ ಪ್ರೌಢವಿಭಾಗದ ಮುಖ್ಯಗುರುಗಳಾದ ಶ್ರೀಮತಿ ಶೈಲಶ್ರೀ ರೈ.ಎಸ್, ಆಂಗ್ಲಮಾಧ್ಯಮ ವಿಭಾಗದ ಮುಖ್ಯಗುರುಗಳಾದ ಕುಮಾರಿ ಶ್ವೇತಾ ಕೋಡಿಂಬಾಳ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕ-ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Also Read  ಮಂಗಳೂರು: ಅ.15ರ ವರೆಗೆ ಮರಳುಗಾರಿಕೆ ನಿಷೇಧ

error: Content is protected !!
Scroll to Top