ಜ. 20ರಿಂದ ಸವಣೂರಿನಲ್ಲಿ ಜಿಲ್ಲಾಮಟ್ಟದ ಯುವಜನಮೇಳ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ, ಕಡಬ ತಾಲೂಕು ಪಂಚಾಯತ್, ಸವಣೂರು ಗ್ರಾಮ ಪಂಚಾಯತ್ ಹಾಗೂ ಸವಣೂರು ಯುವಕ ಮಂಡಲ(ರಿ) ಇವರ ಸಹಯೋಗದೊಂದಿಗೆ 2023-24ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನಮೇಳ ಜ. 20 ಹಾಗೂ 21ರಂದು ಸವಣೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉದ್ಘಾಟನೆ ಜ. 20ರಂದು ಬೆಳಿಗ್ಗೆ 10ಗಂಟೆಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಯುವಜನರು ದಕ್ಷಿಣ ಕನ್ನಡ ಜಿಲ್ಲೆಯವರಾಗಿರಬೇಕು ಹಾಗೂ 15 ರಿಂದ 35 ವರ್ಷದೊಳಗಿರಬೇಕು.

Also Read  ಹೊಸ ವರ್ಷಾಚರಣೆ ➤ 30 ಫ್ಲೈ ಓವರ್ ಬಂದ್, ಲಕ್ಷಕ್ಕೂ ಅಧಿಕ ಸಿಸಿಟಿವಿಗಳ ಅಳವಡಿಕೆ!

ಹೆಚ್ಚಿನ ಮಾಹಿತಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ವೈ. ನಾಯಕ್,  ದೂರವಾಣಿ ಸಂಖ್ಯೆ:0824-2451264 ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಮೊ.ಸಂಖ್ಯೆ:8971631945 ಅವರನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೆಶಕರ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top