ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿ; ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖಾ ಮಾರ್ಗಸೂಚಿಯಂತೆ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಉಚಿತ ತರಬೇತಿ- ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್ (ಸಿ.ಸಿ.ಎನ್.ಎ), ಸಿಸ್ಕೊ ಐ.ಟಿ, ಎಸೆನ್ಸಿಯಲ್ಸ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್, ಟ್ಯಾಲಿ ಇಖP/PಖIಒಇ ಕೋರ್ಸ್‍ಗಳ ತರಬೇತಿ ನೀಡಲಾಗುವುದು.


ಆಸಕ್ತ ಅರ್ಹ ಅಭ್ಯರ್ಥಿಗಳು ಮಂಗಳೂರಿನ ಕದ್ರಿ ಹಿಲ್ಸ್‍ ನಲ್ಲಿರುವ ಸರಕಾರಿ ಮಹಿಳಾ ಐ.ಟಿ.ಐ.ಯ ಎರಡನೇ ಮಹಡಿಯಲ್ಲಿರುವ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ(ಕೆ.ಜಿ.ಟಿ.ಟಿ.ಐ.) ಕಚೇರಿಯಿಂದ ಅರ್ಜಿ ಪಡೆದು ತರಬೇತಿಗೆ ಹೆಸರು ನೊಂದಾಯಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2211477, 8277741731 ಅನ್ನು ಸಂಪರ್ಕಿಸುವಂತೆ ಕೆ.ಜಿ.ಟಿ.ಟಿ.ಐ. ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ನಡು ರಸ್ತೆಯಲ್ಲೇ ಹೊತ್ತಿ ಉರಿದ ಶಾಲಾ ವಿದ್ಯಾರ್ಥಿಗಳಿದ್ದ‌ ಬಸ್ ► ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

error: Content is protected !!
Scroll to Top