ಜ. 28ರಂದು ರಾಜ್ಯಾದ್ಯಂತ ಕಾನ್ಸ್ಟೇಬಲ್ ಹುದ್ದೆ ಲಿಖಿತ ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‍ ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಜನವರಿ 28ರಂದು ಬೆಳಿಗ್ಗೆ 11ರಿಂದ 12.30 ಗಂಟೆಯವರೆಗೆ ರಾಜ್ಯಾದ್ಯಂತ ನಡೆಯಲಿದೆ.

ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಸಿಎಆರ್ ಮತ್ತು ಡಿಎಆರ್), (ಪುರುಷ ಮತ್ತು ತೃತೀಯ ಲಿಂಗ ಪುರುಷ) 3,064 ಹುದ್ದೆಗಳು ಖಾಲಿ ಇದ್ದು, ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್‍ಎಂಎಸ್ ಮೂಲಕ ಮಾಹಿತಿಯನ್ನು ನೀಡಲಾಗುವುದು. ಕರಪತ್ರದ ಲಿಂಕ್ ಅನ್ನು ಕಳುಹಿಸಲಾಗುವುದು. ಅಭ್ಯರ್ಥಿಗಳು ಕರಪತ್ರವನ್ನು ಡೌನ್‍ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗುವಂತೆ ಮಂಗಳೂರು ಪೊಲೀಸ್ ಆಯುಕ್ತರ ಪ್ರಕಟಣೆ ತಿಳಿಸಿದೆ.

Scroll to Top