(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಮಂಜೂರಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತೆಗಳು:
ಮಾನ್ಯತೆ ಪಡೆದ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಾಗಿರಬೇಕು. ವಿದ್ಯಾರ್ಥಿಯ ಪೋಷಕರ ಕುಟುಂಬದ ಆದಾಯ ಮಿತಿ ವಾರ್ಷಿಕ ರೂ.2.50 ಲಕ್ಷ ಮಿತಿಯೊಳಗೆ ಇರಬೇಕು, ವಿದ್ಯಾರ್ಥಿಯು ಮುಂದಿನ ತರಗತಿಗೆ ಪ್ರವೇಶ ಪಡೆಯಲು ಅರ್ಹತೆ ಹೊಂದಿರಬೇಕು.
ದಾಖಲೆಗಳು- ವಿದ್ಯಾರ್ಥಿ, ಪೋಷಕರ ಆಧಾರ್ ಸಂಖ್ಯೆ, ವಿದ್ಯಾರ್ಥಿಯ ಕಾಲೇಜು ಮತ್ತು ಕೋರ್ಸ್ ನ ವಿವರಗಳು, ನೋಂದಣಿ ಸಂಖ್ಯೆ, ವಿದ್ಯಾರ್ಥಿಯ ಅಥವಾ ಪೋಷಕರ ಮೊಬೈಲ್ ಸಂಖ್ಯೆ, ಜಾತಿ, ಆದಾಯ ಪತ್ರದ ಆರ್.ಡಿ ಸಂಖ್ಯೆ ಪ್ರತಿ, ವಿದ್ಯಾರ್ಥಿಯ ಎಸ್.ಎಸ್.ಎಲ್.ಸಿ ನೋಂದಣಿ ಸಂಖ್ಯೆ, ವಿದ್ಯಾರ್ಥಿಗಳ ಎಸ್.ಎ.ಟಿ.ಎಸ್ ಗುರುತಿನ ಸಂಖ್ಯೆ, ಕಾಲೇಜು ನೋಂದಣಿ ಸಂಖ್ಯೆ, ವಿದ್ಯಾರ್ಥಿಯ ಇಮೇಲ್ ಐಡಿ, ಮನೆಯ ವಿಳಾಸ, ಸಂಬಂಧಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ, ಹಾಸ್ಟೆಲ್ ವಿವರಗಳನ್ನು ಹೊಂದಿರಬೇಕು. ವಿದ್ಯಾರ್ಥಿಗಳು ವೆಬ್‍ಸೈಟ್ ವಿಳಾಸ https://txd.karnataka.gov.in/ ರಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ:080- 22261789, 080-44554455 ಗೆ ಸಂಪರ್ಕಿಸುವಂತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.