ವಿಕಲಚೇತನರಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯು ಫಲಾನುಭವಿ ಆಧಾರಿತ ಯೋಜನೆಗಳನ್ನು 2023-24ನೇ ಸಾಲಿನಲ್ಲಿ ಸೇವಾ ಸಿಂಧು ಯೋಜನೆಯಿಂದ ಡಿ.ಬಿಟಿ (ನೇರ ನಗದು ವರ್ಗಾವಣೆ) ಆನ್‍ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿರುತ್ತದೆ.

ಯೋಜನೆಗಳು- ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ ಹಾಗೂ ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್‍ಕಿಟ್ ಯೋಜನೆ.

ಈ ಯೋಜನೆಗಳಿಗೆ ವಿಕಲಚೇತನರ ಫಲಾನುಭವಿಗಳು (Suvidha Portal Website URL: https://sevasindhu.karnataka.gov.in/Sevasindhu/Kannada) ಆನ್‍ಲೈನ್ ಪೋರ್ಟಲ್‍ನಲ್ಲಿ ಗ್ರಾಮ ಓನ್, ಕರ್ನಾಟಕ ಒನ್, ಬೆಂಗಳೂರು ಒನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಚೇರಿ ಸಹಾಯವಾಣಿ ಸಂಖ್ಯೆ: 0824-2455999ನ್ನು ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ತೆರಿಗೆ ವಂಚನೆ ಪ್ರಕರಣ ➤ಚಿನ್ನಾಭರಣ ವ್ಯಾಪಾರಿಗಳಿಗೆ ಐಟಿ ಶಾಕ್!

error: Content is protected !!
Scroll to Top