ಕಡಬ: ಅನಾರೋಗ್ಯದಿಂದ ಪ್ರಥಮ ಬಿ.ಕಾಂ‌. ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜ.12. ತೀವ್ರ ಅನಾರೋಗ್ಯಕ್ಕೆ ಒಳಗಾಗಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಕಡಬ ಸಮೀಪದ ಎಡಮಂಗಲ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.

ಮೃತ ಯುವತಿಯನ್ನು ಸುಬ್ರಹ್ಮಣ್ಯ ಪದವಿ ಕಾಲೇಜಿನ ಪ್ರಥಮ ಬಿ.ಕಾಂ. ವಿದ್ಯಾರ್ಥಿನಿ, ಎಡಮಂಗಲ ನಿವಾಸಿ ತೃಪ್ತಿ ಎಂದು ಗುರುತಿಸಲಾಗಿದೆ. ಎರಡು ದಿನಗಳಿಂದ ಅನಾರೋಗ್ಯದಿಂದಿದ್ದ ಈಕೆಯನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರದಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Scroll to Top