ಟಿವಿ ಕಾರ್ಯಕ್ರಮ ನೀಡುತ್ತಿದ್ದ ವೇಳೆ ಕುಸಿದು ಬಿದ್ದು ಕೃಷಿ ತಜ್ಞ ಮೃತ್ಯು

(ನ್ಯೂಸ್ ಕಡಬ) newskadaba.com ಕೇರಳ, 13: ದೂರದರ್ಶನದಲ್ಲಿ ಲೈವ್ ಟೆಲಿಕಾಸ್ಟ್ ಮೂಲಕ  ಕೃಷಿಯ ಬಗ್ಗೆ ಮಾಹಿತಿ ನೀಡುತ್ತಿದ್ದ ಸಂದರ್ಭ ಕೃಷಿ ತಜ್ಞರು ಮೃತಪಟ್ಟ ಘಟನೆ ವರದಿಯಾಗಿದೆ.

ಮೃತ ಕೃಷಿ ತಜ್ಞರನ್ನು ಕೇರಳ ಕೃಷಿ ವಿಶ್ವವಿದ್ಯಾಲಯದಲ್ಲಿ ಯೋಜನಾ ನಿರ್ದೇಶಕರಾಗಿದ್ದ ಡಾ. ಅನಿ ದಾಸ್ (59) ಎಂದು ಗುರುತಿಸಲಾಗಿದೆ. ಇವರು ಕೃಷಿಗೆ ಸಂಬಂಧಿಸಿದ ಮಾಹಿತಿ ನೀಡಲು ದೂರದರ್ಶನದಲ್ಲಿ ನಡೆಯುತ್ತಿದ್ದ ಚರ್ಚಾ ಕಾರ್ಯಕ್ರಮಗಳಲ್ಲಿ ಆಗಾಗ ಭಾಗಿಯಾಗುತ್ತಿದ್ದು ಶುಕ್ರವಾರ ಕೂಡ ಎಂದಿನಂತೆ ನಡೆದ ಕೃಷಿ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಹೃದಯ ಸ್ತಂಭನಕ್ಕೆ ಒಳಗಾಗಿ ದಿಢೀರನೇ ಕುಸಿದು ಬಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Also Read  ಕಾರು ಮತ್ತು ಟ್ಯಾಂಕರ್ ನಡುವೆ ಢಿಕ್ಕಿ ➤ ನವ ದಂಪತಿ ಮೃತ್ಯು..!

error: Content is protected !!
Scroll to Top