12 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ – ಆದೇಶ ಹೊರಡಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, . 13. 12 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರವು ಶುಕ್ರವಾರದಂದು ಆದೇಶ ಹೊರಡಿಸಿದೆ.

ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಸನ್ನ ಎಚ್. ಅವರನ್ನು ರಾಜ್ಯ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ಮಾಡಲಾಗಿದ್ದು, ಬಿಬಿಎಂಪಿ ವಿಶೇಷ ಭೂಸ್ವಾಧೀನ ಅಧಿಕಾರಿ ಪ್ರತೀಕ್ ಬಯಾಲ್ ಅವರನ್ನು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಪಶುಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ಸಲ್ಮಾ ಕೆ.ಫಹೀಮ್ ಅವರನ್ನು ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿಯಾಗಿ, ರಾಜ್ಯ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕ ಉಜ್ವಲ್ ಕುಮಾರ್ ಘೋಷ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(ಇ-ಆಡಳಿತ)ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಸತ್ಯವತಿ ಜಿ. ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾಗಿ, ಹಣಕಾಸು ಇಲಾಖೆಯ ಕಾರ್ಯದರ್ಶಿ ಡಾ.ರೇಜು ಎಂ.ಟಿ. ಅವರನ್ನು ರಾಜ್ಯ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ತುಳಸಿ ಮದ್ದಿನೇನಿ ಅವರನ್ನು ಪಶುಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕ ಸಂಗಪ್ಪ ಅವರನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನ ಕಾರ್ಯಕಾರಿ ನಿರ್ದೇಶಕರಾಗಿ, ವಿಜಯಪುರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ರಾಹುಲ್ ಶಿಂಧೆ ಅವರನ್ನು ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ತುಮಕೂರು ಜಿಲ್ಲೆಯ ಮಧುಗಿರಿ ಉಪವಿಭಾಗದ ಹಿರಿಯ ಸಹಾಯಕ ಆಯುಕ್ತ ರಿಶಿ ಆನಂದ್ ಅವರನ್ನು ವಿಜಯಪುರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ರಾಜ್ಯ ವಿದ್ಯುತ್ ಕಾರ್ಖಾನೆ ನಿಯಮಿತದ ವ್ಯವಸ್ಥಾಪಕ ನಿರ್ದೇಶಕಿ ಶಿಲ್ಪಾ ಶರ್ಮಾ ಅವರನ್ನು ರಾಜ್ಯ ಲೋಕಸೇವಾ ಆಯೋಗದ ಪರೀಕ್ಷಾ ನಿಯಂತ್ರಕಿಯಾಗಿ, ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ಅಟಲ್ ಜನಸ್ನೇಹಿ ಕೇಂದ್ರದ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

Also Read  ➤ ನಾಡಬಂದೂಕಿನ ಗುಂಡು ತಗುಲಿ ಬಾಲಕ ಮೃತ್ಯು

error: Content is protected !!
Scroll to Top