ಹಿಂದೂಸ್ತಾನಿ ಸಂಗೀತದ ಖ್ಯಾತ ಗಾಯಕಿ ಪ್ರಭಾ ಅತ್ರೆ ವಿಧಿವಶ

(ನ್ಯೂಸ್ ಕಡಬ) newskadaba.com ನವದೆಹಲಿ, . 13. ಹಿಂದೂಸ್ತಾನಿ ಸಂಗೀತದ ಖ್ಯಾತ ಗಾಯಕಿ 92 ವರ್ಷದ ಪ್ರಭಾ ಅತ್ರೆ ಅವರು ಹೃದಯಘಾತದಿಂದ ಇಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಪುಣೆಯಲ್ಲಿ ನೆಲೆಸಿದ್ದ ಪ್ರಭಾ ಅತ್ರೆ ಅವರಿಗೆ ಇಂದು ಮನೆಯಲ್ಲಿ ಇರುವ ವೇಳೆ ಹೃದಯಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಕಾನೂನು ಪದವೀಧರರಾಗಿದ್ದ ಅತ್ರೆ ಅವರು ಸಂಗೀತದಲ್ಲಿ ಡಾಕ್ಟರೇಟ್ ಪಡೆದಿದ್ದರು. ಬಹುಮುಖಿ ವ್ಯಕ್ತಿತ್ವದ ಅತ್ರೆ ಶಾಸ್ತ್ರೀಯ ಗಾಯಕಿ ಮಾತ್ರವಲ್ಲದೇ, ಶಿಕ್ಷಣ ತಜ್ಞೆಯಾಗಿ, ಸಂಶೋಧಕಿಯಾಗಿ, ಲೇಖಕಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದರು. ಇದರೊಂದಿಗೆ ಅವರಿಗೆ 1990ರಲ್ಲಿ ಪದ್ಮಶ್ರೀ, 2002ರಲ್ಲಿ ಪದ್ಮಭೂಷಣ ಹಾಗೂ 2022ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

Also Read  ಬೆಳ್ತಂಗಡಿ: ತೋಡಿಗೆ ಜಾರಿಬಿದ್ದು ವ್ಯಕ್ತಿ ಮೃತ್ಯು..!

error: Content is protected !!
Scroll to Top