ಕಡಬ: ರೈಲ್ವೇ ಹಳಿ ಪಕ್ಕದಲ್ಲೇ ಆತ್ಮಹತ್ಯೆಗೆ ಶರಣಾದ ನಿವೃತ್ತ ರೈಲ್ವೇ ಉದ್ಯೋಗಿ

(ನ್ಯೂಸ್ ಕಡಬ) newskadaba.com ಕಡಬ, ಜ‌.17. ಇಲ್ಲಿನ ಕೋಡಿಂಬಾಳ ರೈಲ್ವೇ ಹಳಿಯ ಪಕ್ಕದಲ್ಲೇ ನಿವೃತ್ತ ರೈಲ್ವೇ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರದಂದು ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಕೋಡಿಂಬಾಳ ಗ್ರಾಮದ ಗುಂಡಿಮಜಲು‌ ನಿವಾಸಿ ಮಾಧವ ರೈ ( 62 ವ) ಎಂದು ಗುರುತಿಸಲಾಗಿದೆ. ಕೋಡಿಂಬಾಳದ ರೈಲು ಮಾರ್ಗದ ಸಮೀಪ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿ ಯಲ್ಲಿ ಪತ್ತೆಯಾಗಿದೆ .ಮೃತದೇಹವನ್ನು ಕಡಬ ಸರಕಾರಿ ಆಸ್ಪತ್ರೆಗೆ ಮರಣೊತ್ತರ ಪರೀಕ್ಷೆಗೆ ಮಾಡಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಕಡಬ ಪೊಲೀಸರು ಘಟನಾ‌ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ ಹಾಗೂ 6 ಮಂದಿ ಮಕ್ಕಳನ್ನು ಅಗಲಿದ್ದಾರೆ.

Also Read  ನಟ ದರ್ಶನ್ ರನ್ನು ಬೇರೆಡೆ ಸ್ಥಳಾಂತರಿಸುವಂತೆ ಸಿಎಂ ಸೂಚನೆ

error: Content is protected !!
Scroll to Top