ಬೆಳ್ಳಾರೆ ಹಾಡಹಗಲೇ ಚಿನ್ನದ ಸರ ಎಗರಿಸಿದ ಆರೋಪಿಗಳು

(ನ್ಯೂಸ್ ಕಡಬ) newskadaba.com ಕಡಬ, ಫೆ.03. ಹಾಡುಹಗಲೇ ಮಹಿಳೆಯೊಬ್ಬರ ಚಿನ್ನದ ಸರವನ್ನು ಎಗರಿಸಿದ ಇಬ್ಬರು ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಪುತ್ತೂರು ನರಿಮೊಗರು ಗ್ರಾಮದ ಮುಕ್ವೆ ನಿವಾಸಿ ನೌಶಾದ್ ಬಿ.ಎ.(36) ಮತ್ತು ಸುಲಿಗೆಗೆ ಸಹಕರಿಸಿದ ಕಾಸರಗೋಡು ಉದ್ಯಾವರ ನಿವಾಸಿ ಚಂದ್ರಮೋಹನ್ (42) ಎಂದು ಗುರುತಿಸಲಾಗಿದೆ. ಆರೋಪಿಗಳು ಬೆಳ್ಳಾರೆ ಠಾಣಾ ವ್ಯಾಪ್ತಿಯ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ ಹಾಡಹಗಲೇ ಮಹಿಳೆಯ ಚಿನ್ನದ ಸರವನ್ನು ಎಗರಿಸಿದ್ದರು. ಆರೋಪಿಗಳಿಂದ 80 ಸಾವಿರ ರೂ. ಮೌಲ್ಯದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಸಿದ ಸ್ಕೂಟರನ್ನು ವಶಪಡಿಸಿಕೊಳ್ಳಲಾಗಿದೆ.

Also Read  ಕೊರೋನಾ ರೀ ಎಂಟ್ರಿ  ➤ ಭಯ ಹುಟ್ಟಿಸುತ್ತಿದೆ ಹೊಸ ರೂಪತಳಿ      

error: Content is protected !!
Scroll to Top