ಯುವಕನಿಗಾಗಿ ಮನೆ ಮುಂದೆ ಧರಣಿ ಕುಳಿತ ಯುವತಿ

(ನ್ಯೂಸ್ ಕಡಬ) newskadaba.com ವಿಟ್ಲ, ಫೆ. 07. ಉತ್ತರ ಭಾರತ ಮೂಲದ ಯುವತಿಯೋರ್ವಳು ಕೇಪು ಗ್ರಾಮದ ಅಡ್ಯನಡ್ಕದ ಯುವಕನೊಬ್ಬನ ಮನೆ ಮುಂದೆ ಬಂದು ಯುವಕನನ್ನು ತನಗೆ ಒಪ್ಪಿಸುವಂತೆ ಪ್ರತಿಭಟನೆಗೆ ಕುಳಿತ ವಿಚಿತ್ರ ಘಟನೆ ನಡೆದಿದೆ.

ಉತ್ತರ ಭಾರತದ ಜಲಂದರ್ ಮೂಲದ ಯುವತಿಯೋರ್ವಳು ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಈ ಸಂದರ್ಭ ಅಡ್ಯನಡ್ಕದ ಯುವಕನ ಪರಿಚಯವಾಗಿ ಪ್ರೇಮಾಂಕುರವಾಗಿ, ಹಣಕಾಸಿನ ವ್ಯವಹಾರಗಳೂ ನಡೆದಿದ್ದವು ಎಂದೆನ್ನಲಾಗಿದೆ. ಇತ್ತ ಮಂಗಳವಾರದಂದು ಸಾಯಂಕಾಲ ಅಡ್ಯನಡ್ಕದಲ್ಲಿರುವ ಯುವಕನ ಮನೆ ಬಳಿಗೆ ಬಂದ ಸಂತ್ರಸ್ತೆಗೆ ಪ್ರೀತಿ ಮಾಡುವುದಾಗಿ ಹೇಳಿದ ಯುವಕ ಸಿಕ್ಕಿಲ್ಲ. ಇದರಿಂದಾಗಿ ಯುವಕನನ್ನು ತನಗೆ ಒಪ್ಪಿಸುವಂತೆ ಪಟ್ಟು ಹಿಡಿದು ಮನೆಯ ಮುಂದೆ ಕೂತಿದ್ದಾಳೆ. ಸ್ಥಳೀಯರು ಸ್ಥಳದಲ್ಲಿ ಜಮಾಯಿಸುತ್ತಿದ್ದಂತೆ ವಿಟ್ಲ ಠಾಣೆಯಿಂದ ಆಗಮಿಸಿದ ಪೊಲೀಸರು ಯುವತಿಯನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಸ್ಥಳದಲ್ಲಿ ಎರಡು ಸಮುದಾಯದ ಜನರು ಸೇರಿದ ಹಿನ್ನಲೆಯಲ್ಲಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿತ್ತು.

Also Read  ಮಗಳಿಂದಲೇ ಸ್ವಂತ ಅಪ್ಪನ ಮೇಲೆ ಅತ್ಯಾಚಾರ ಆರೋಪ ➤ ಮಗಳು ಹಾಗೂ ಪತ್ನಿಯ ಹೆಸರು ಬರೆದು ಆತ್ಮಹತ್ಯೆಗೆ ಶರಣಾದ ತಂದೆ

error: Content is protected !!
Scroll to Top