ಶೋಭಾ ಕರಂದ್ಲಾಜೆಯಿಂದ ಸುಳ್ಳಿನ ರಾಜಕೀಯ: ಸಚಿವ ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.25. ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರ ಅನುಮಾನಾಸ್ಪದ ಸಾವಿಗೆ ಸಂಬಂಧಿಸಿ ರಾಜ್ಯ ಸರಕಾರದ ಮೇಲೆ ವಿನಾಕಾರಣ ಆರೋಪ ಮಾಡಿದ್ದ ಸಂಸದೆ ಶೋಭಾ ಕರಂದ್ಲಾಜೆ ಇದೀಗ ರಾಜಕೀಯ ಪ್ರೇರಿತವಾಗಿ ಪಡಿತರ ಚೀಟಿ ಮಾಫಿಯಾ ಎಂಬ ಸುಳ್ಳು ಸುದ್ದಿ ಹರಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆಹಾರ ಸಚಿವ ಯು.ಟಿ.ಖಾದರ್ ಆಕ್ಷೇಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಅನುರಾಗ್ ತಿವಾರಿ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಮಾಡಲಾದ ಆರೋಪದ ಬಗ್ಗೆ ಲಿಖಿತವಾಗಿ ದೂರು ನೀಡುವಂತೆ ತಿಳಿಸಲಾಗಿತ್ತು. ಆದರೆ ಮೌನವಾಗಿದ್ದ ಸಂಸದೆ ಇದೀಗ ಪಡಿತರ ಚೀಟಿ ಮಾಫಿಯಾ ಎಂಬ ಆರೋಪ ಮಾಡುತ್ತಿದ್ದಾರೆ. ತಮ್ಮ ಸರಕಾರ ಅಧಿಕಾರ ವಹಿಸಿಕೊಂಡ ಬಳಿಕ ಬೋಗಸ್ ಕಾರ್ಡ್‌ಗಳನ್ನು ತಡೆಹಿಡಿಯಲಾಗಿದೆ. ಬಿಜೆಪಿ ಅವಧಿಯಲ್ಲಿ ಇಲಾಖೆಯಲ್ಲಿದ್ದ ಅಶಿಸ್ತು ಹಾಗೂ ಅವ್ಯವಹಾರವನ್ನು ಮಟ್ಟ ಹಾಕಲಾಗಿದೆ. ಹಾಗಿದ್ದರೂ ಸುಳ್ಳು ಆಪಾದನೆ ಮಾಡುವ ಬದಲು, ಇಲಾಖೆಯನ್ನು ಜನಪರವಾಗಿ ಅಭಿವೃದ್ಧಿಪಡಿಸುವಲ್ಲಿ ಯಾವುದಾದರೂ ಸಲಹೆ ಸೂಚನೆಗಳ್ನು ನೀಡಿದಲ್ಲಿ ಅದನ್ನು ಸ್ವೀಕರಿಸಲಾಗುವುದು ಎಂದರು.

Also Read  ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ - ಎಡವಟ್ಟು ಮಾಡಿಕೊಂಡ ಕಾಂಗ್ರೆಸ್

ಜನಪರ ಯೋಜನೆಗಳ ಮೂಲಕ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮುಖ್ಯಮಂತ್ರಿ ವಿರುದ್ಧ ಟೀಕೆ ಮಾಡುವ ನೈತಿಕ ಹಕ್ಕು ಶೋಭಾ ಕರಂದ್ಲಾಜೆಯವರಿಗೆ ಇಲ್ಲ. ಅವರ ಮಾತನ್ನು ಅವರ ಪಕ್ಷದವರೇ ಕೇಳುವುದಿಲ್ಲ. ಹಾಗಿದ್ದರೂ ತಮ್ಮ ರಾಜಕೀಯ ನೆಲೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ‘ಕಾಗದದ ಹುಲಿ’ಯಾಗಲು ಅವರು ಪ್ರಯತ್ನಿಸುತ್ತಿದ್ದಾರೆ ಎಂದು ಸಚಿವ ಖಾದರ್ ಟೀಕಿಸಿದರು.

error: Content is protected !!
Scroll to Top