ಬಸ್ ಢಿಕ್ಕಿ- ದ್ವಿಚಕ್ರ ವಾಹನ ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 12. ಕೆಎಸ್ಸಾರ್ಟಿಸಿ ಬಸ್‌ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರನೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಅಡ್ಯಾರ್‌ ಸಮೀಪದ ಅರ್ಕುಳ ದ್ವಾರದ ಬಳಿ ಸಂಭವಿಸಿದೆ.

ಮೃತ ಸವಾರನನ್ನು ಸ್ಥಳೀಯ ನಿವಾಸಿ ಚರಣ್‌ ರಾಜ್‌ ಎಂದು ಗುರುತಿಸಲಾಗಿದೆ. ಇವರು ಒಳರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ಸಂದರ್ಭ ಬಸ್‌ ಢಿಕ್ಕಿಯಾಗಿದೆ ಎನ್ನಲಾಗಿದೆ. ಅವೈಜ್ಞಾನಿಕ ಕಾಮಗಾರಿಯಿಂದಾಗಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದ, ಇದಕ್ಕೆ ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Also Read  ಆಕರ್ಷಣ ತಂತ್ರ ಮತ್ತು ದಿನ ಭವಿಷ್ಯ

 

error: Content is protected !!
Scroll to Top