ಕಡಬ: ಸ್ಪಂದನಾ ಸಮುದಾಯ ಸಹಕಾರ ಸಂಘ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಫೆ. 12. ಸಹಕಾರಿ ಸಂಘಗಳು ಸಮಾಜದಲ್ಲಿ ಸಹಕಾರಿಯಾಗಿ ಕೆಲಸ ಮಾಡುತ್ತಿವೆ. ಸಹಕಾರ ಸಂಘಗಳ ಮೂಲಕ ಸದಸ್ಯರು ತಾವು ಪಡೆದ ಸಾಲವನ್ನು ಸಮರ್ಪಕವಾಗಿ ಸಕಾಲದಲ್ಲಿ ಮರುಪಾವತಿ ಮಾಡಿದಲ್ಲಿ ಸಂಘ ಅಭಿವೃದ್ದಿ ಹೊಂದಲು ಸಾಧ್ಯ. ಸ್ವಾಭಿಮಾನದ ಬದುಕು ಕಟ್ಟಿಕೊಂಡು ಜೀವನ ನಡೆಸಲು ಸಹಕಾರ ಸಂಘಗಳು ಸಹಕಾರಿ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಭಾನುವಾರದಂದು ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆದ ಸ್ಪಂದನಾ ಸಮುದಾಯ ಸಹಕಾರ ಸಂಘದ ಶುಭಾರಂಭ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರು ಸಹಕಾರ ಕೊಟ್ಟಾಗ ಮಾತ್ರ ಸಂಘ ಅಭಿವೃದ್ದಿಯಾಗುತ್ತದೆ. ಒಳ್ಳೆಯ ಕೆಲಸ ಮಾಡಿದಾಗ ಸಮಾಜದಲ್ಲಿ ಗುರುತಿಸಿಕೊಳ್ಳಲು ಸಾಧ್ಯ. ಸ್ಪಂದನಾ ಸಹಕಾರ ಸಂಘ ಕಡಬ ತಾಲೂಕಿನಲ್ಲಿ ಮಾತ್ರವಲ್ಲದೇ ಜಿಲ್ಲೆ, ರಾಜ್ಯ ಮಟ್ಟದಲ್ಲಿಯೂ ಮಾದರಿ ಸಂಘವಾಗಿ ಮೂಡಿಬರಲಿ ಎಂದರು.


ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಸ್ಥಾಪಕಾಧ್ಯಕ್ಷ ಸುರೇಶ್ ಬೈಲುರವರು ಮಾತನಾಡಿ, ಕಡಬದಲ್ಲಿ ಆರಂಭಗೊಂಡಿರುವ ಸ್ಪಂದನಾ ಸಮುದಾಯ ಸಹಕಾರಿ ಸಂಘವು ಎಲ್ಲರ ಜೊತೆ ಸ್ಪಂದಿಸಲಿದೆ. ಸಮಾಜದ ಪ್ರತಿಯೊಬ್ಬರೂ ಸದಸ್ಯರಾಗುವ ಮೂಲಕ ಸಂಘದಲ್ಲಿ ವ್ಯವಹಾರ ನಡೆಸಬೇಕು. ಆ ಮೂಲಕ ಸಂಘ ಅಭಿವೃದ್ದಿಯಲ್ಲಿ ಸಹಕಾರ, ಪ್ರೋತ್ಸಾಹ ನಿರಂತರ ನೀಡಬೇಕು ಎಂದರು. ಕೆಪಿಸಿಸಿ ಸದಸ್ಯ ಜಿ.ಕೃಷ್ಣಪ್ಪ ಮಾತನಾಡಿ, ವಿವಿಧ ಇಲಾಖೆಗಳಲ್ಲಿ ಉನ್ನತ ಹುದ್ದೆಗಳನ್ನು ದ.ಕ ಜಿಲ್ಲೆಯವರು ಅಲಂಕರಿಸಿಕೊಳ್ಳಬೇಕು. ಈ ಮೂಲಕ ಜಿಲ್ಲೆಯ ಪ್ರತಿಯೊಬ್ಬರು ತಮ್ಮ ಬದುಕನ್ನು ಕಟ್ಟಿಕೊಳ್ಳಬೇಕು ಎಂದರು.

ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಮೇಶ್ ಕಲ್ಪುರೆ, ಕಡಬ ಶಾಖೆಯ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುದರ್ಶನ ಗೌಡ ಕೋಡಿಂಬಾಳ, ಕಡಬ ಶಾಖೆಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಗಣೇಶ್ ಕೈಕುರೆ ಶುಭಹಾರೈಸಿದರು. ಕಡಬ ಶಾಖೆಯ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್‌ನ ವ್ಯವಸ್ಥಾಪಕರಾದ ಅಮಿತಾ ಶೆಟ್ಟಿ, ಕಡಬ ಸ್ಪಂದನಾ ಸಮುದಾಯ ಸಹಕಾರ ಸಂಘದ ಗೌರವ ಸಲಹೆಗಾರರಾದ ಚಂದ್ರಶೇಖರ ಗೌಡ ಕೋಡಿಬೈಲು, ಕೃಷ್ಣಪ್ಪ ಗೌಡ ಕೆಂಜಾಳ, ಉಪಾಧ್ಯಕ್ಷ ಚೇತನ್ ಆನೆಗುಂಡಿ, ನಿರ್ದೇಶಕರಾದ ಚಂದ್ರಶೇಖರ ಸಣ್ಣಾರ, ಚಂದ್ರಶೇಖರ ಗೌಡ ಬರೆಪ್ಪಾಡಿ, ನಾಗೇಶ್ ಕೆಡೆಂಜಿ, ರೋಹಿತ್ ಎಚ್.ಎಚ್, ಗೋಪಾಲ ಎಣ್ಣೆಮಜಲು, ಕಾಂತಪ್ಪ ಗೌಡ, ಗೀತಾ ಕುಮಾರಿ ಕೇವಳ, ಹಿರಿಯಣ್ಣ ಗೌಡ, ಆಶಾ ತಿಮ್ಮಪ್ಪ ಗೌಡ, ದಾಮೋದರ ಪಿ, ಲೋಕೇಶ್ ಬಿ.ಎನ್ ಉಪಸ್ಥಿತರಿದ್ದರು.

Also Read  'ಅತೃಪ್ತ ಬ್ಯಾಂಕ್ ನೌಕರರೇ, ಕೆಲಸ ಬಿಟ್ಟು ತೊಲಗಿ' ► ನೀತಿ ತಂಡದಿಂದ ಸಾಮಾಜಿಕ ಜಾಲತಾಣದಲ್ಲಿ ವಿನೂತನ ಹೋರಾಟ

error: Content is protected !!
Scroll to Top