ಬಂಟ್ವಾಳ: ಲಾರಿ ಮತ್ತು ರಿಕ್ಷಾ ನಡುವೆ ಅಪಘಾತ- ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 12. ಲಾರಿ ಮತ್ತು ರಿಕ್ಷಾದ ನಡುವೆ ನಡೆದ ಅಪಘಾತ ಸಂಭವಿಸಿ, ರಿಕ್ಷಾ ಚಾಲಕನೋರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಲ್ಲಿನ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.

ಗಾಯಗೊಂಡ ರಿಕ್ಷಾ ಚಾಲಕನನ್ನು ಚೇತನ್ ಎಂದು ಗುರುತಿಸಲಾಗಿದೆ. ಢಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಸಂಪೂರ್ಣ ಜಖಂಗೊಂಡಿದೆ. ಆದರೆ ಚಾಲಕ ಚೇತನ್ ಅವರ ಕಾಲಿಗೆ ಸ್ವಲ್ಪ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Scroll to Top