(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 13. ಭಾರತ ಸಂವಿಧಾನ ಅಂಗೀಕಾರಗೊಂಡ 75ನೇ ವರ್ಷದ ಆಚರಣೆಯ ಪ್ರಯುಕ್ತ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಪುತ್ತೂರು ತಾಲೂಕು ಸಮಾಜ ಕಲ್ಯಾಣ ಇಲಾಖೆ, ಕಬಕ ಗ್ರಾಮ ಪಂಚಾಯತ್ ಇದರ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ತಾಲೂಕಿನ ಕಬಕ ಗ್ರಾಮ ಪಂಚಾಯತ್‍ಗೆ ಸೋಮವಾರ ಬೆಳಿಗ್ಗೆ 9.30ಕ್ಕೆ ಆಗಮಿಸಿತು. ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮ ಪಂಚಾಯತ್‍ನಿಂದ ಪುತ್ತೂರು ತಾಲೂಕಿನ ಕಬಕ ಗ್ರಾಮ ಪಂಚಾಯತ್‍ಗೆ ಚೆಂಡೆ, ತಾಳ ಮದ್ದಳೆ, ಕಳಶ ಮತ್ತು ವಿದ್ಯಾರ್ಥಿಗಳು ರ್ಯಾಲಿ ಮೂಲಕ ಸಂವಿಧಾನ ಜಾಗೃತಿ ಜಾಥಾವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು.
ಡಾ. ಅಂಬೇಡ್ಕರ್ ಅವರ ಪುತ್ಥಳಿಗೆ ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ ಅವರು ಹಾರಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು, ಕಬಕ ಶಾಲಾ ವಿದ್ಯಾರ್ಥಿಗಳಿಂದ ಪಂಚಾಯತ್ ಆವಣರದಲ್ಲಿ ಕಾಲ್ನಡಿಗೆ ಜಾಥಾ ನಡೆಸಲಾಯಿತು. ಹಾಗೂ ಸಂವಿಧಾನ ಪೀಠಿಕೆ ಪಠಣ, ಸಂವಿಧಾನ ಹಾಗೂ ಸರಕಾರದ ಯೋಜನೆಗಳ ಬಗ್ಗೆ ಅರಿವು, ಇತ್ಯಾದಿ ಕಾರ್ಯಕ್ರಮಗಳನ್ನು ನಡೆಸಲಾಯಿತು.
“ಸಂವಿಧಾನ ಜಾಗೃತಿ ಜಾಥವನ್ನು ಶುಕ್ರವಾರ ತಣ್ಣೀರುಪಂತ ಗ್ರಾಮ ಪಂಚಾಯತ್‍ನಿಂದ ಕಲ್ಲೇರಿ ಅಂಬೆಡ್ಕರ್ ಭವನದವರೆಗೆ ಕಾಲ್ನಡಿಗೆ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಯಿತು. ತದನಂತರ ಗ್ರಾಮ ಪಂಚಾಯತ್ ಕಛೇರಿಯ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ ಎಂ. ರವರಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಸರಕಾರಿ ಪ್ರೌಢಶಾಲೆ, ಕರಾಯ ಇಲ್ಲಿನ ಮುಖ್ಯೋಪಾಧ್ಯಾಯರಾದ ಬಸವಲಿಂಗಪ್ಪ ಸಂವಿಧಾನದ ಬಗ್ಗೆ ಪೀಠಿಕೆಯನ್ನು ಬೋಧಿಸಿದರು. ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಪುತ್ತೂರು ತಾಲೂಕಿನ ಕೊಡಿಪ್ಪಾಡಿ ಗ್ರಾಮ ಪಂಚಾಯತ್‍ಗೆ ಶುಕ್ರವಾರ ಆಗಮಿಸಿತು. ಕುಡಿಪ್ಪಾಡಿ ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತ್ ಅಧ್ಯಕ್ಷರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿಗೆ ಹಾರಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಲಾ ವಿದ್ಯಾರ್ಥಿಗಳಿಂದ ಪಂಚಾಯತ್ ಆವರಣದಲ್ಲಿ ಕಾಲ್ನಡಿಗೆ ಜಾಥಾ ನಡೆಸಲಾಯಿತು. ಅಂಬೇಡ್ಕರ್ ಭಾವಚಿತ್ರಕ್ಕೆ ಪ್ರಮುಖರಿಂದ ಹೂವಿನ ಮಾಲಾರ್ಪಣೆ, ಸಂವಿಧಾನ ಪೀಠಿಕೆ ಪಠಣ, ಸಂವಿಧಾನ ಹಾಗೂ ಸರಕಾರದ ಯೋಜನೆಗಳ ಬಗ್ಗೆ ಅರಿವು ಮೂಡಿಸಲಾಯಿತು.
ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಬಲ್ನಾಡು ಗ್ರಾಮ ಪಂಚಾಯತ್‍ಗೆ ಆಗಮಿಸಿತು. ಬಲ್ನಾಡು ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತ್ ಅಧ್ಯಕ್ಷರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪುತ್ಥಳಿಗೆ ಹಾರಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಲಾ ವಿದ್ಯಾರ್ಥಿಗಳಿಂದ ಪಂಚಾಯತ್ ಆವಣರದಲ್ಲಿ ಕಾಲ್ನಡಿಗೆ ಜಾಥಾ, ಬೈಕ್ ರಾಲಿ, ಕಾರ್ ರಾಲಿ ನಡೆಸಲಾಯಿತು. ನಂತರ ಸಂವಿಧಾನ ಪೀಠಿಕೆ ಪಠಣ, ಸಂವಿಧಾನ ಹಾಗೂ ಸರಕಾರದ ಯೋಜನೆಗಳ ಬಗ್ಗೆ ಅರಿವು, ಇತ್ಯಾದಿ ಕಾರ್ಯಕ್ರಮ ನಡೆಯಿತು.
ಭಾರತ ಸಂವಿಧಾನ ಅಂಗೀಕಾರಗೊಂಡ 75ನೇ ವರ್ಷದ ಆಚರಣೆಯ ಪ್ರಯುಕ್ತ “ಸಂವಿಧಾನ ಜಾಗೃತಿ ಜಾಥಾವು ಶುಕ್ರವಾರ ಬಾರ್ಯ ಗ್ರಾಮ ಪಂಚಾಯತ್ ಕಜೆಮಾರುವಿನಿಂದ ಮೂರುಗೋಳಿ ಬಸ್ಸ್ ಸ್ಟಾಂಡ್‍ವರೆಗೆ ಕಾಲ್ನಡಿಗೆ ಮೆರವಣಿಗೆ ಜಾಥಾ ಮೂಲಕ ಬರಮಾಡಿಕೊಳ್ಳಲಾಯಿತು. ತದನಂತರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂರುಗೋಳಿ ಜಂಕ್ಷನ್ ನಲ್ಲಿ ಕಾರ್ಯಕ್ರಮ ನೆರವೇರಿಸಲಾಯಿತು. ಗ್ರಾಮ ಪಂಚಾಯತ್ ತೆಕ್ಕಾರು ಆಶ್ರಯದಲ್ಲಿ ಶುಕ್ರವಾರ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ನಡೆಯಿತು. ಬಾಜಾರು ರಿಕ್ಷಾ ತಂಗುದಾಣದಿಂದ ಆರಂಭಿಸಿ ಗ್ರಾಮ ಪಂಚಾಯತ್ ಸಭಾ ಭವನದವರೆಗೆ ಸಂವಿಧಾನ ಜಾಗೃತಿ ಜಾಥಾವನ್ನು ಭವ್ಯ ಮೆರವಣಿಗೆಯೊಂದಿಗೆ ಸ್ವಾಗತಿಸಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಹಿಯಾನತ್ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂವಿಧಾನ ಪೀಠಿಕೆ ಭೋದನೆ ಮಾಡಿದರು. ಮಂಗಳೂರಿನ ಕಲಾ ತಂಡದಿಂದ ಸಂವಿಧಾನ ಜಾಗೃತಿ ಮೂಡಿಸುವ ಗೀತ ಗಾಯನ ಮತ್ತು ಕಿರು ಪ್ರಹಸನ ಪ್ರದರ್ಶಿಸಲಾಯಿತು. ಈ ಸಂದರ್ಭದಲ್ಲಿ ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಒಳಗೊಂಡ ಸಂವಿಧಾನ ಜಾಗೃತಿ ಜಾಥಾ ಸ್ತಬ್ದ ಚಿತ್ರವನ್ನು ಪ್ರದರ್ಶಿಸಲಾಯಿತು. ನಾಗರೀಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿಯನ್ನೊಳಗೊಂಡ ಬೀದಿ ನಾಟಕವನ್ನು ಪ್ರದರ್ಶಿಸಲಾಯಿತು.