ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 13. ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕುಕ್ಕಾಜೆ ನಿವಾಸಿ ಮಹಮ್ಮದ್ ಸಮೀವುಲ್ಲಾ ಹಾಗೂ ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕಂಚಿಲ ನಿವಾಸಿ ಇಬ್ರಾಹಿಂ ಎದು ಗುರುತಿಸಲಾಗಿದೆ. ಪೊಲೀಸ್ ನಿರೀಕ್ಷಕರಾದ ಶಿವಕುಮಾರ್ ಬಿ ಮಾರ್ಗದರ್ಶನದಲ್ಲಿ ಪೊಲೀಸ್ ಉಪನಿರೀಕ್ಷಕರಾದ ಮೂರ್ತಿ, ಸಿಬ್ಬಂದಿಗಳಾದ ಹೆಚ್.ಸಿ ಕೃಷ್ಣ ಮತ್ತು ಪಿ.ಸಿ ಯೋಗೇಶ್ ಹಾಗೂ ಪುನೀತ್ ರವರು ಮಾಹಿತಿ ಸಂಗ್ರಹಿಸಿ ಬೆಂಗಳೂರಿನಿಂದ ದಸ್ತಗಿರಿ ಮಾಡಿರವುದಾಗಿ ತಿಳಿದುಬಂದಿದೆ. ಆರೋಪಿಗಳನ್ನು ಮಂಗಳೂರಿನ  2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Also Read  ನೆಲ್ಯಾಡಿ: ಬ್ಯಾಂಕ್ ಖಾತೆಯಿಂದ ಹಣ ಪಡೆದು ಶಿಕ್ಷಕಿಗೆ ವಂಚನೆ ➤ ಸೈಬರ್ ಕ್ರೈಮ್ ಠಾಣೆಯಲ್ಲಿ ದೂರು ದಾಖಲು

error: Content is protected !!
Scroll to Top