ಒಂದೇ ದಿನ 6 ಜನರಿಗೆ ಮಂಗನ ಕಾಯಿಲೆ ದೃಢ- ಆರೋಗ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಫೆ. 13. ಶಿವಮೊಗ್ಗದ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಫೆ. 12 ರಂದು ಆರು ಮಂದಿಗೆ ಮಂಗನ ಕಾಯಿಲೆ ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು 42 ಮಂದಿಗೆ ಪರೀಕ್ಷೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.

ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಕೆಎಫ್ಡಿ ಬಾಧಿತ ಪ್ರದೇಶದಲ್ಲಿ ಜ್ವರದಿಂದ ಬಳಲುತ್ತಿದ್ದ ಆರು ಮಂದಿಯ ರಕ್ತದ ಮಾದರಿಯನ್ನು ಶಿವಮೊಗ್ಗದ ವೈರಲ್ ಡಯಾಗ್ನಸ್ಟಿಕ್ ಲ್ಯಾಬ್ ಗೆ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಮಂಗನ ಕಾಯಿಲೆ ದೃಢಪಟ್ಟಿದೆ ಎಂದು ತಿಳಿದು ಬಂದಿದೆ.

Also Read  ಕಲ್ಲಾಜೆ: 407 ಟೆಂಪೋ ಪಲ್ಟಿ ► ಇಬ್ಬರು ಮೃತ್ಯು, ಹಲವರಿಗೆ ಗಾಯ

error: Content is protected !!
Scroll to Top