(ನ್ಯೂಸ್ ಕಡಬ) newskadaba.com, ಪುತ್ತೂರು, ಫೆ. 13. ರೋಡ್ ರೋಲರ್ ವಾಹನವನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ರೈಲ್ವೇ ಓವರ್ ಬ್ರಿಡ್ಜ್ ನ ಅಡಿಯಲ್ಲಿ ಸಿಲುಕಿಕೊಂಡ ಪರಿಣಾಮ ಕೆಲಕಾಲ ಸಂಚಾರಕ್ಕೆ ಅಡಚಣೆಯಾದ ಘಟನೆ ಬಿಸಿರೋಡಿನ ಕೈಕಂಬ ಸಮೀಪದ ಮೊಡಂಕಾಪು ಎಂಬಲ್ಲಿ ನಡೆದಿದೆ.
ಖಾಸಗಿ ಗುತ್ತಿಗೆ ಸಂಸ್ಥೆಗೆ ಸೇರಿದ ಲಾರಿ ಇದಾಗಿದ್ದು, ಬೆಂಜನಪದವು ಸೈಟ್ ನಿಂದ ಸವಣೂರಿನಲ್ಲಿ ನಡೆಯಲಿರುವ ಕಾಮಗಾರಿಗೆ ರೋಲರ್ ನ್ನು ಲಾರಿಯಲ್ಲಿ ತುಂಬಿಸಿಕೊಂಡು ಹೋಗಲಾಗಿತ್ತು. ಈ ವೇಳೆ ಮೊಡಂಕಾಪು ಎಂಬಲ್ಲಿ ರೈಲ್ವೇ ಸೇತುವೆಯ ಅಡಿಭಾಗದಲ್ಲಿ ಕ್ರಾಸ್ ಮಾಡಲು ಸಾಧ್ಯವಾಗದೇ ಸಿಲುಕಿಕೊಂಡಿದೆ. ಘಟನೆಯಿಂದಾಗಿ ರೈಲ್ವೇ ಇಲಾಖೆಗೆ ಸೇರಿದ ಕಬ್ಬಿಣದ ರಾಡ್ ತುಂಡಾಗಿ ಲಾರಿಯ ಮೇಲೆ ಬಿದ್ದಿದೆ. ಸ್ಥಳಕ್ಕೆ ರೈಲ್ವೇ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ. ಅಲ್ಲದೇ ಘಟನೆ ಸಂದರ್ಭ ಸಂಚಾರಕ್ಕೆ ಅಡಚಣೆಯಾಗಿದ್ದು, ಮೆಲ್ಕಾರ್ ಟ್ರಾಫಿಕ್ ಠಾಣಾ ಪೊಲೀಸರು ಬೇಟಿ ನೀಡಿ ಕ್ರೇನ್ ಮೂಲಕ ಲಾರಿಯನ್ನು ಬದಿಗೆ ಸರಿಸಿ ಮುಕ್ತ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.