‘ದಿಲ್ಲಿ ಚಲೋ ಪ್ರತಿಭಟನೆ’- ಹರ್ಯಾಣಾದ ಶಂಭು ಗಡಿಯಲ್ಲಿ ರೈತರ ಮೇಲೆ ಅಶ್ರುವಾಯು ಪ್ರಯೋಗ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಫೆ. 13. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಾವಿರಾರು ರೈತರು ರಾಷ್ಟ್ರ ರಾಜಧಾನಿ ದೆಹಲಿಯತ್ತ ಹೊರಟಿದ್ದು, ಪಂಜಾಬ್‌ ಮತ್ತು ಹರ್ಯಾಣ ನಡುವಿನ ಶಂಭು ಗಡಿಯಲ್ಲಿ ಒಂದು ಸೇರುತ್ತಿದ್ದಂತೆಯೇ ಪ್ರತಿಭಟನಾ ನಿರತ ರೈತರ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ ಘಟನೆ ವರದಿಯಾಗಿದೆ.

ಕೇಂದ್ರ ಸರ್ಕಾರದ ವಿರುದ್ಧ ರೈತರು ಬೃಹತ್‌ ದಿಲ್ಲಿ ಚಲೋ ಯಾತ್ರೆ ಕೈಗೊಂಡಿದ್ದು, ಅದನ್ನು ತಡೆಯಲು ದೆಹಲಿಯಲ್ಲಿ ಈಗಾಗಲೇ ಪೊಲೀಸರು ವ್ಯಾಪಕ ವ್ಯವಸ್ಥೆಯನ್ನು ಮಾಡಿದ್ದು ದಿಲ್ಲಿಯ ಗಡಿಗಳಾದ ಸಿಂಘು, ಟಿಕ್ರಿ ಮತ್ತು ಯಪಿ ಗೇಟ್‌ ಅನ್ನು ಸೀಲ್‌ ಮಾಡಿದ್ದಾರೆ.

Also Read  BIG NEWS: ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ..? ➤ ಅಂತಿಮ ಆದೇಶ ಬಾಕಿ..

error: Content is protected !!
Scroll to Top